ರಾಜ್ಯ

ಬೆಳಗಾವಿ: ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಪಾಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಂಗ್ರಾಲಿ(ಕೆಎಚ್) ಗ್ರಾಮದ ನಿವಾಸಿ ನಾಗೇಶ್ ಕರೆಪ್ಪ ಲಮಾಣಿ (31)ಗೆ ನ್ಯಾಯಾಲಯವು ಎರಡು ಲಕ್ಷ ರೂ. ದಂಡ ವಿಧಿಸಿದೆ.

ಬೆಳಗಾವಿ: ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಪಾಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಪೋಕ್ಸೋ ನ್ಯಾಯಾಲಯವು 30 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಂಗ್ರಾಲಿ(ಕೆಎಚ್) ಗ್ರಾಮದ ನಿವಾಸಿ ನಾಗೇಶ್ ಕರೆಪ್ಪ ಲಮಾಣಿ (31)ಗೆ ನ್ಯಾಯಾಲಯವು ಎರಡು ಲಕ್ಷ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಜೂನ್ 2020ರಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಸಂತ್ರಸ್ತೆ, ಮನೆಯಲ್ಲಿ ತಾನು ಒಬ್ಬಂಟಿಯಾಗಿರುವ ಅವಕಾಶವನ್ನು ಬಳಸಿಕೊಂಡು ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಳು.

ನಾಗೇಶ್ ತನ್ನ ಕೃತ್ಯವನ್ನು ಬಹಿರಂಗಪಡಿಸಿದರೆ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿ ಆರೋಪಿಸಿದ್ದರು.

ಪದೇಪದೆ ಅತ್ಯಾಚಾರದ ಪರಿಣಾಮವಾಗಿ, ಅಪ್ರಾಪ್ತ ಬಾಲಕಿ ಗರ್ಭಿಣಿಯಾದಳು ಮತ್ತು ನಂತರ ಮಗುವಿಗೆ ಜನ್ಮ ನೀಡಿದಳು.

ವಿಶೇಷ ತ್ವರಿತಗತಿಯ ಪೋಕ್ಸೊ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶೆ ಸಿ ಎಂ ಪುಷ್ಪಲತಾ ಅವರು, ಏಳು ಸಾಕ್ಷಿಗಳು ಮತ್ತು 37 ದಾಖಲೆ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ಆರೋಪಿ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಗುರುವಾರ ತೀರ್ಪು ನೀಡಿದ್ದಾರೆ.

30 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂ. ದಂಡ ವಿಧಿಸಿರುವ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಸಂತ್ರಸ್ತೆಗೆ ಏಳು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ ಮತ್ತು ಆ ಮೊತ್ತವನ್ನು ಐದು ವರ್ಷಗಳ ಅವಧಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಠೇವಣಿ ಇಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.