ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್
ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು..

ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ 'ಕಾನ್ಫಿಡೆಂಟ್ ಗ್ರೂಪ್' ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಬಿಗ್‌ಬಾಸ್ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ.
ಸಿ. ಜೆ ರಾಯ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹನುಮಂತ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್ ಎಂದು ಬರೆದುಕೊಂಡಿದ್ದಾರೆ.
ತುಂಬಾ ದುಃಖಕರ ಸಂಗತಿ. ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು. ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ ಸರ್. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್’ ಎಂದು ಬರೆದುಕೊಂಡಿದ್ದಾರೆ.

ಸಿ.ಜೆ. ರಾಯ್ ಅವರು ಸರಿಗಮಪ ಸೀಸನ್ 15ರಲ್ಲಿ ಹನುಮಂತು ರನ್ನರ್ ಅಪ್ ಆಗಿದ್ದಾಗ ಬಹುಮಾನದ ರೂಪದಲ್ಲಿ ಹಣ ನೀಡಿದ್ದರು. ಬಳಿಕ ಬಿಗ್‌ಬಾಸ್ ಸೀಸನ್ 11ರಲ್ಲಿಯೂ ಹನುಮಂತ ಗೆದ್ದಾಗ ಅವರೇ ಖುದ್ದು ಹಣವನ್ನು ನೀಡಿದ್ದರು. ಈ ಬಗ್ಗೆ ಹನುಮಂತು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



