ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ: ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ, ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿಗುಂಡು ಹಾರಿಸಿಕೊಂಡಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಶನಿವಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದೆ.
ರಾಜ್ಯ ಸರ್ಕಾರ, ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಆದೇಶ ಹೊರಡಿಸಿದೆ. ಈ ಎಸ್‌ಐಟಿ ಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಇರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.
ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾವಿನ ಕೇಸ್ ತನಿಖೆ ನಡೆಸುತ್ತಿದ್ದರು. ಈಗ ಅಶೋಕ ನಗರ ಪೊಲೀಸರಿಂದ ಎಸ್‌ಐಟಿಗೆ ಕೇಸ್ ವರ್ಗಾವಣೆಯಾಗಲಿದೆ. ಕೇಸ್ ದಾಖಲೆ, ಸಾಕ್ಷಿ, ಎಫ್ಐಆರ್ ಪ್ರತಿ ಸೇರಿದಂತೆ ಎಲ್ಲವನ್ನೂ ಅಶೋಕ್ ನಗರ ಪೊಲೀಸರು ಎಸ್‌ಐಟಿ ಗೆ ವರ್ಗಾಯಿಸಲಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯಲ್ಲಿ ಶೋಧ ನಡೆಸುತ್ತಿದ್ದರು. ಈ ವೇಳೆ ರಾಯ್ ಅವರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
"ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಗುಂಡಿನ ದಾಳಿ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ, ಕಾನ್ಫಿಡೆಂಟ್ ಗ್ರೂಪ್ ನ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ತೋರುತ್ತದೆ. ಅವರ ಮೃತದೇಹ ಎಚ್ಎಸ್ಆರ್ ಲೇಔಟ್ ನ ನಾರಾಯಣ ಆಸ್ಪತ್ರೆಯಲ್ಲಿದೆ" ಎಂದು ಸೀಮಂತ್ ಕುಮಾರ್ ಸಿಂಗ್ ಅವರು ನಿನ್ನೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



