ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಎಂಬಾತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ರವಿಕಿರಣ್ ಗೆ ಮೊದಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆಗೆ ರವಿಕಿರಣ್ ಗೆ ಪರಿಚಯ ಬೆಳೆದಿತ್ತು. ಬಳಿಕ ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿ ಜೊತೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.
ಇನ್ನು ರವಿಕಿರಣ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ವಿಚಾರ ತಿಳಿದು ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೆ ಪೋಷಕರು ಜೊತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರು ಆಧರಿಸಿ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


