Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು
ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.

ಬೆಂಗಳೂರು: ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ವೃತ್ತದ ಬಳಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕವನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ (KRV) ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮಂಗಳವಾರ ಸಂಜೆ ಕೆಆರ್‌ವಿ ಕಾರ್ಯಕರ್ತರು ಬೆಲ್ ವೃತ್ತದ ಬಳಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕವನ್ನು ಮೊದಲು ಹಾನಿಗೊಳಿಸಿ, ಬಳಿಕ ಅದನ್ನು ಕೆಳಗೆ ಕೆಡವಿದ್ದರು.
ಈ ವೇಳೆ, ನಾಮಫಲಕವನ್ನು ಅಕ್ರಮವಾಗಿ ಅಳವಡಿಸಲಾಗಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ ಇರಬೇಕು. ಹಿಂದಿ ಭಾಷೆಯನ್ನು ಉತ್ತೇಜಿಸುವ ಅಥವಾ ಹೇರಿಕೆ ಮಾಡುವ ಯಾವುದೇ ಪ್ರಯತ್ನವನ್ನು ನಾವು ವಿರೋಧಿಸುತ್ತೇವೆ" ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಜಾಲಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, "ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.
ಪ್ರತಿಭಟನೆಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದ್ದು, ಸಾರ್ವಜನಿಕ ಆಸ್ತಿಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



