ಗೃಹ ಜ್ಯೋತಿ ಯೋಜನೆ ಪರಿಶೀಲನೆ ಆರಂಭ; ಮೊದಲ ದಿನ 2,500ಕ್ಕೂ ಹೆಚ್ಚು ಮನೆಗಳಿಗೆ ಬೆಸ್ಕಾಂ ಭೇಟಿ
ಬೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಮನೆಗಳಿಗೆ ಮೀಟರ್ ರೀಡರ್‌ಗಳು ಹಾಗೂ ಕ್ಷೇತ್ರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಗ್ರಹಿಸಿದ ಮಾಹಿತಿಯನ್ನು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಹಾಗೂ ಮುದ್ರಿತ ನಮೂನೆಯಲ್ಲಿ ದಾಖಲಿಸಲಾಯಿತು ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಅಭಿಯಾನದ ಮೊದಲ ದಿನವಾದ ನಿನ್ನೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಅಧಿಕಾರಿಗಳು 2,536 ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದರು.
ಬೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಮನೆಗಳಿಗೆ ಮೀಟರ್ ರೀಡರ್‌ಗಳು ಹಾಗೂ ಕ್ಷೇತ್ರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಗ್ರಹಿಸಿದ ಮಾಹಿತಿಯನ್ನು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಹಾಗೂ ಮುದ್ರಿತ ನಮೂನೆಯಲ್ಲಿ ದಾಖಲಿಸಲಾಯಿತು ಎಂದು ಬೆಸ್ಕಾಂ ತಿಳಿಸಿದೆ.
ಸರ್ಕಾರವು ಮೊನ್ನೆ ತಡರಾತ್ರಿ ಹೊರಡಿಸಿದ ಆದೇಶದಂತೆ, ಜುಲೈ 1ರಿಂದ ಆಗಸ್ಟ್ 31ರವರೆಗೆ ಎಲ್ಲ ಎಸ್ಕಾಂಗಳ ಮೀಟರ್ ರೀಡರ್‌ಗಳು ಮನೆ-ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಲಿದ್ದಾರೆ. ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಆರಂಭಿಕ ನೋಂದಣಿಯ ವೇಳೆ ನೀಡಿದ್ದ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ಜೊತೆಗೆ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಅಥವಾ ಗುತ್ತಿಗೆ ಒಪ್ಪಂದದ ವಿವರಗಳು ಹಾಗೂ ವರ್ಗದ ಮಾಹಿತಿಯನ್ನು ಸಲ್ಲಿಸಬೇಕಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪರಿಶೀಲನಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಫಲಾನುಭವಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಈಗಾಗಲೇ ಎಸ್‌ಎಂಎಸ್ ಮೂಲಕ ಮಾಹಿತಿ ಕಳುಹಿಸಲಾಗಿದೆ.
ಕ್ಷೇತ್ರ ಸಿಬ್ಬಂದಿ ಮುದ್ರಿತ ಘೋಷಣಾ ಪತ್ರದಲ್ಲಿ ಫಲಾನುಭವಿಗಳ ಭೌತಿಕ ಸಹಿಯನ್ನೂ ಸಂಗ್ರಹಿಸಲಿದ್ದಾರೆ. ಮನೆಗೆ ಭೇಟಿ ನೀಡುವ ವೇಳೆ ನೋಂದಾಯಿತ ಫಲಾನುಭವಿ ಲಭ್ಯವಿಲ್ಲದಿದ್ದರೆ, ಅವರ ಸಮೀಪದ ಕುಟುಂಬ ಸದಸ್ಯರ ಸಹಿಯನ್ನು ಪಡೆಯಲಾಗುತ್ತದೆ.
ಮನೆ-ಮನೆಗೆ ಭೇಟಿ ವೇಳೆ ಫಲಾನುಭವಿ ಭಾಗಶಃ ಮಾಹಿತಿಯನ್ನು ಮಾತ್ರ ನೀಡಿದರೆ, ಆ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್‌ನ ಡ್ರಾಫ್ಟ್ ವಿಭಾಗದಲ್ಲಿ ತಾತ್ಕಾಲಿಕವಾಗಿ ಉಳಿಸಲಾಗುತ್ತದೆ. ನಂತರ ಕ್ಷೇತ್ರ ಸಿಬ್ಬಂದಿ ಮತ್ತೆ ಮನೆಗೆ ಭೇಟಿ ನೀಡಿ ಉಳಿದ ಮಾಹಿತಿಯನ್ನು ಸಂಗ್ರಹಿಸಿ ಅಂತಿಮವಾಗಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



