Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ.

ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ.
ಮತದಾರರು ಸ್ವಯಂಪ್ರೇರಿತರಾಗಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಇತ್ತ ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪಗಳು ಕೇಳಿಬಂದಿವೆ.
ಬಿಎಲ್‌ಒಗಳ ಕರ್ತವ್ಯ ಲೋಪದ ಗಂಭೀರ ಆರೋಪಗಳು ಕೇಳಿಬಂದಿದ್ದು, ರಾಮನಗರ ಕ್ಷೇತ್ರದ ಪ್ರಸ್ತುತ SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸುವಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸರ್ಕಾರದಿಂದ ದುರುಪಯೋಗ
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿಷಯದಲ್ಲಿ ಕರ್ನಾಟಕ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ನಕಲಿ ಗುರುತಿನ ಚೀಟಿಗಳನ್ನು ಹೊಂದಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಗೋ ಫಸ್ಟ್ (Go First) ಕಂಪನಿಗೆ ನಿರ್ದೇಶನ ನೀಡಿದೆ ಎಂದು ಆರೋಪಿಸಲಾಗಿದೆ.
ಕಳೆದ ನಾಲ್ಕೈದು ವರ್ಷಗಳಿಂದ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಸೂಕ್ತ ಪರಿಶೀಲನೆ ನಡೆಸದೆ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಹೇಳಲಾಗಿದೆ.
ವಿಶೇಷವಾಗಿ ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಮತದಾನ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹವರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿ ಪ್ರಮುಖ ಕಾರಣರಾಗಿದ್ದು, ಈ ಹಿಂದೆ ಕೂಡ ಇಂತಹ ಅಕ್ರಮ ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ವಿಯಾಗಿರುವ ಇತಿಹಾಸ ಅವರಿಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ವಿಷಯವನ್ನು ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಅಲ್ಲದೆ, ಕೆಲ ಕಾರ್ಮಿಕರ ಫೋಟೋಗಳನ್ನು ಅವರ ಒತ್ತಾಯವಿಲ್ಲದೆ ತೆಗೆದು, ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಹಾಗೂ ಸಹಕರಿಸದಿದ್ದರೆ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳನ್ನೂ ಈ ವಿಷಯದಲ್ಲಿ ಉಲ್ಲೇಖಿಸಲಾಗಿದೆ.
ಕುಮಾರಸ್ವಾಮಿ ಹೇಳಿದ್ದೇನು?
ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.
ರಾಮನಗರದ ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ಮುಖ್ಯಮಂತ್ರಿಗಳೇ ಕಳ್ಳಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ, ಸಿಎಂ ಇದಕ್ಕೆ ಪ್ರೇರೆಪಣೆ. ಚುನಾವಣೆ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಎಸ್ಐಆರ್ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಮುತುವರ್ಜಿ ವಹಿಸಿ ಎಸ್ಐಆರ್ನಲ್ಲಿ ಸರಿಯಾಗಿ ಮಾಹಿತಿ ಕೊಡಿ ಅಂತ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತದಾರರ ಲಿಸ್ಟ್ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಈ ದೊಡ್ಡ ಜಾಹೀರಾತಿನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್ಐಆರ್ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




