ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಸ್ಟೂಡೆಂಟ್: ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಯೇ ಕಟ್!
ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹುಬ್ಬಳ್ಳಿ : ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ನಡೆದಿದೆ.
ಮೃತ ಯುವಕನನ್ನು ಶಿರೂರು ಗ್ರಾಮದ ಪಕ್ಕಿರಯ್ಯ ಚನ್ನಯ್ಯ ಮುತ್ತಳ್ಳಿಮಠ (18) ಎಂದು ಗುರುತಿಸಲಾಗಿದೆ. ಪಕ್ಕಿರಯ್ಯ ಹುಬ್ಬಳ್ಳಿಯಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದು, ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ. ಬಸ್ನ ಹಿಂಬದಿ ಆಸನದಲ್ಲಿ ಕುಳಿತಿದ್ದ ಆತ ಕಿಟಕಿಯಿಂದ ತಲೆ ಹೊರಹಾಕಿದ್ದಾನೆ ಎನ್ನಲಾಗಿದೆ.
ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



