ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Video
ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಡಪಟ್ಟಣದಲ್ಲಿರುವ ಕಲ್ಲುಕ್ವಾರಿಯಲ್ಲಿ ಸಂಭವಿಸಿದ ಕುಸಿತ ದುರಂತದಲ್ಲಿ ಸುಮಾರು ಎಂಟು ಮಂದಿ ಮೃತಪಟ್ಟಿರುವ ಶಂಕೆಯಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಈ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿರುವಂತೆ ತೋರುತ್ತಿದೆ. ಅವರಲ್ಲಿ ಹೆಚ್ಚಿನವರು ಇತರೆ ರಾಜ್ಯದವರಾಗಿದ್ದು, ಒಬ್ಬರು ನಮ್ಮ ರಾಜ್ಯದವರು. ವಿವರವಾದ ವರದಿಗಾಗಿ ನಾವು ಕಾಯುತ್ತಿದ್ದೇವೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಪ್ರಾಥಮಿಕವಾಗಿ ಇದು ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ ಎಂದರು.
ರಾಜ್ಯ ಸರ್ಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಅಲ್ಲದೇ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಇಂಥಹ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇ ಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



