ದಿನ ಬೆಳಗಾದ್ರೆ ದೇವಸ್ಥಾನ ಸುತ್ತುತ್ತೀರಿ, ಮತ್ತೊಂಡೆದೆ ಮುಸ್ಲಿಮರನ್ನು ಓಲೈಸುತ್ತೀರಿ: ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ- ವಿಜಯೇಂದ್ರ
ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.

ಬೆಂಗಳೂರು: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಹೋಗಿ ಪರಿಶೀಲನೆ ನಡೆಸುವ ಬದಲು, ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.
ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಮುಂಗಾರು ಅಧಿವೇಶನ ಮಾಡುತ್ತಾರಂತೆ. ಆದರೆ ಅಧಿವೇಶನ ಮುಂದೂಡಲು ಎಸ್ಐಆರ್ ಕಾರಣ ಅಲ್ಲ. ರೇಟ್ ಫಿಕ್ಸ್ ಆಗದೆ ಸಂಪುಟ ವಿಸ್ತರಣೆ ಡೇಟ್ ಫಿಕ್ಸ್ ಆಗುತ್ತಿಲ್ಲ. ಶಾಸಕರು ಏನು ಮನೆ ಮನೆಗೆ ಹೋಗಿ ಎಸ್ಐಆರ್ ಮಾಡುತ್ತಿದ್ದಾರಾ? ಬದಲಾಗಿ ಕಾಂಗ್ರೆಸ್ ಶಾಸಕರು ಬಿಎಲ್ಒಗಳನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ.
ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡುತ್ತಿದ್ದಾರೆ. ಹಿಂದೂಗಳು ಮಸೀದಿ ಒಳಗೆ ಹೋಗಲು ಸಾಧ್ಯವಾಗದ ರೀತಿ ಆಗಿದೆ. ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ ಎಂದವರು ಆರೋಪಿಸಿದ್ದಾರೆ.
ಎಸ್‌ಐಆರ್ ಹೇಗೆ ಮಾಡ್ಬೇಕು? ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಹೋಗಿ ಪರಿಶೀಲನೆ ಮಾಡ್ಬೇಕು. ಆದರೆ ಇಲ್ಲಿ ಮದುವೆ ಮನೆ, ಮಸೀದಿ ಇನ್ನಿತರ ಜಾಗಳಲ್ಲಿ ಎಸ್‌ಐಆರ್ ಮಾಡ್ತಿದ್ದಾರೆ ಎಂದು ಗರಂ ಆಗಿದ್ದಾರೆ.
ಒಂದೆಡೆ ಡಿಕೆ ಶಿವಕುಮಾರ್ ದಿನ ಬೆಳಗಾದರೆ ದೇವಾಸ್ಥಾನ ಸುತ್ತುತ್ತಾರೆ, ಮತ್ತೊಂದೆಡೆ ಮುಸ್ಲಿಮರ ಓಲೈಕೆ ಮಾಡುತ್ತಾರೆ ಎಂದು ಆರೋಪಿಸಿದ ಅವರು, ಡಿಕೆ ಅವರದ್ದು ಸಾಫ್ಟ್ ಹಿಂದುತ್ವ ಪಿಕೆ ಮತ್ತು ಬಿಕೆಗಳು ಹಿಂದೂ ವಿರೋಧಿಗಳು ಎಂದು ವಿಜಯೇಂದ್ರ ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



