ರಾಜ್ಯದ ಡಿಜಿಟಲ್ ವ್ಯವಸ್ಥೆಗೆ ಮತ್ತಷ್ಟು ಬಲ: DCM ಡಾ.ಜಿ.ಪರಮೇಶ್ವರ್ ಭೇಟಿಯಾದ KDEM ನಿಯೋಗ!
ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ನಿಯೋಗವು ಇಂದು ಉಪ ಮುಖ್ಯಮಂತ್ರಿ ಆಗಿರುವ ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಕರ್ನಾಟಕವನ್ನು ಡಿಜಿಟಲ್ ಪರಿವರ್ತನೆಯ ಕ್ಷೇತ್ರದಲ್ಲಿ ಇನ್ನಷ್ಟು ಮುಂಚೂಣಿಯಲ್ಲಿರಿಸುವ ದೂರದೃಷ್ಟಿ, ಭವಿಷ್ಯದ ಕಾರ್ಯಯೋಜನೆಗಳು ಹಾಗೂ ರಾಜ್ಯದ ಬ್ರ್ಯಾಂಡಿಂಗ್ ಕಾರ್ಯತಂತ್ರದ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಜೊತೆಗೆ, ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.
ಕರ್ನಾಟಕದ ಡಿಜಿಟಲ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜೊತೆಗೆ ನಮ್ಮ ಸರ್ಕಾರ ನಿರಂತರ ಸಹಕಾರ ನೀಡಲಿದೆ ಎಂದು ಡಾ.ಜಿ.ಪರಮೇಶ್ವರ್ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷರಾದ ಬಿ.ವಿ. ನಾಯ್ಡು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಗುಪ್ತಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



