ರಾಜ್ಯ

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ.

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ
ವಿ. ಅನ್ಬುಕುಮಾರ್
Published On :

ಬೆಂಗಳೂರು: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಿಎಲ್‌ಒಗಳು ಮನೆಗಳಿಗೆ ತೆರಳದೇ ರಸ್ತೆಗಳಲ್ಲಿ ಟೆಂಟ್‌ ಹಾಕಿಕೊಂಡು ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು.

ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಫಾರಂ ಹಂಚುವ ಬದಲು, ಕಚೇರಿಗಳಲ್ಲೇ ಕುಳಿತು ವಿತರಿಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಿಇಒ ವಿ. ಅನ್ಬುಕುಮಾರ್, ಎಲ್ಲಾ ಬಿಎಲ್‌ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆ ಬಾಗಿಲಿಗೆ ಭೇಟಿ ನೀಡಿ ಫಾರಂ ವಿತರಿಸಬೇಕು. ವಿಶೇಷ ತೀವ್ರ ಪರಿಷ್ಕರಣೆಯ ಎಲ್ಲಾ ಹಂತಗಳಲ್ಲೂ ಇಸಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ಅಗತ್ಯ ನಿರ್ದೇಶನ ನೀಡಬೇಕು ಎಂದು ಆದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.