ಕಲಬುರಗಿ: ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ, ಪ್ರಯಾಣಿಕರಿಂದ ತೀವ್ರ ಟೀಕೆ, ಆಕ್ರೋಶ-Viral Video
ವೈರಲ್ ಆದ ವಿಡಿಯೊಗಳ ಬಳಿಕ ಪ್ರತಿಕ್ರಿಯಿಸಿರುವ ಸ್ಥಳೀಯ ಕೆಕೆಆರ್‌ಟಿಸಿ ಅಧಿಕಾರಿಗಳು, ಬಸ್‌ನ ಹೆಡ್‌ಲೈಟ್ ವೈರಿಂಗ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ ಈ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದ್ಗಾರೆ.

ಕಲಬುರಗಿ: ಕಲಬುರಗಿಯಿಂದ ಚಿಂಚೋಳಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬಸ್‌ನ ಹೆಡ್‌ಲೈಟ್ ರಾತ್ರಿ ವೇಳೆ ಏಕಾಏಕಿ ಸಂಪೂರ್ಣವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ, ಚಾಲಕ ಮತ್ತು ನಿರ್ವಾಹಕರು ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನ ನೆರವಿನಿಂದ ಬಸ್ ನ್ನು ಚಲಾಯಿಸಿದ ಘಟನೆ ನಡೆದಿದೆ.
ವೈರಲ್ ಆದ ವಿಡಿಯೊಗಳ ಬಳಿಕ ಪ್ರತಿಕ್ರಿಯಿಸಿರುವ ಸ್ಥಳೀಯ ಕೆಕೆಆರ್‌ಟಿಸಿ ಅಧಿಕಾರಿಗಳು, ಬಸ್‌ನ ಹೆಡ್‌ಲೈಟ್ ವೈರಿಂಗ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ ಈ ಸಮಸ್ಯೆ ಎದುರಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾತ್ರಿ 7.30ಕ್ಕೆ ಕಲಬುರಗಿಯಿಂದ ಹೊರಟ ಬಸ್ ತಡರಾತ್ರಿ ಚಿಂಚೋಳಿ ತಲುಪಿತು. ಬಸ್ಸಿನಲ್ಲಿ 8 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಬಸ್ ಕಳೆದ ಮೂರು ದಿನಗಳಿಂದ ಇದೇ ಸ್ಥಿತಿಯಲ್ಲಿ ಓಡಿಸುತ್ತಿರುವುದು ಗೋಚರಿಸಿದೆ ಎಂದು ಪ್ರಯಾಣಿಕರು ದೂರಿದ್ದಾರೆ.
ಕೆಕೆಆರ್‌ಟಿಸಿ ಡಿಪೋ ವ್ಯವಸ್ಥಾಪಕರು, ದೋಷಯುಕ್ತ ಬಸ್‌ನ್ನು ಈಗಾಗಲೇ ಬದಲಾಯಿಸಲಾಗಿದ್ದು, ಅದರ ಬದಲಿಗೆ ಮತ್ತೊಂದು ಬಸ್‌ನ್ನು ಸೇವೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಯಾಣಿಕರು ಚಿತ್ರೀಕರಿಸಿದ ವಿಡಿಯೊಗಳು ವೈರಲ್ ಆದ ನಂತರ, ಈ ಭಾಗದಲ್ಲಿ ಸಂಚರಿಸುತ್ತಿರುವ ಶಿಥಿಲಾವಸ್ಥೆಯ ಬಸ್‌ಗಳ ಬಗ್ಗೆ ಸ್ಥಳೀಯರು ಹಾಗೂ ಹೋರಾಟಗಾರರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


