ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡವೇ ಬೇಡ: ಯದುವೀರ್ ಒಡೆಯರ್
ಕಂಬಳ ಆಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ನಾನು ಸೋಷಿಯಲ್ ಮೀಡಿಯಾದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೇನೆ. ದಸರಾ ಸಮಯದಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇರುತ್ತೆ. ಅಂತದನ್ನು ಮೊದಲು ನಿವಾರಣೆ ಮಾಡಬೇಕು ಎಂದರು.

ಮೈಸೂರು: ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯಲ್ಲ. ಕಂಬಳ ಒಂದು ಆಚರಣೆ, ಅದಕ್ಕೆ ಅದರದೇ ಆದ ನಂಬಿಕೆಯಿದೆ, ಧಾರ್ಮಿಕ ಹಿನ್ನಲೆಯಿದೆ. ಅದನ್ನು ಮೈಸೂರಿಗೆ ತಂದು ವಾಣಿಜ್ಯೀಕರಣ ಮಾಡೋದು ಸರಿಯಲ್ಲ ಎಂದು ಮೈಸೂರು -ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು .
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳ ಆಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ನಾನು ಸೋಷಿಯಲ್ ಮೀಡಿಯಾದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೇನೆ. ದಸರಾ ಸಮಯದಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇರುತ್ತೆ. ಅಂತದನ್ನು ಮೊದಲು ನಿವಾರಣೆ ಮಾಡಬೇಕು ಎಂದರು.
ಕರ್ನಾಟಕ - ಕರಾವಳಿಯ ಪ್ರಸಿದ್ಧ ಹಾಗೂ ಆಕರ್ಷಣೆಯಾಗಿರುವ ಕಂಬಳವನ್ನು ಮೈಸೂರಿನಲ್ಲಿ ನಡೆಸುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕಂಬಳ ಉತ್ಸವವನ್ನು ಆಯೋಜಿಸಲು ಸರ್ಕಾರ ಮುಂದಾಗಿದೆ. ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ವಿಶ್ವ ಪ್ರಸಿದ್ಧಿ ಗಳಿಸಿದೆ. ಇದೀಗ ಇದನ್ನು ಮೈಸೂರಿನ ಜನರಿಗೆ ಪರಿಚಯಿಸಬೇಕು ಹಾಗೂ ಇನ್ನಷ್ಟು ಜನರಿಗೆ ತಲುಪಿಸಬೇಕು ಎನ್ನುವ ಉದ್ದೇಶದಿಂದ ಮೈಸೂರಿನಲ್ಲಿ ಕಂಬಳ ಆಯೋಜಿಸಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ಇದಕ್ಕೆ ಸ್ಥಳೀಯವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಈಗ ಬರ ಪರಿಸ್ಥಿತಿ ಎದುರಾಗಿದೆ. ಸಿಎಂ ಅವರೇ ಆ ಬೆಳೆ ಬೆಳಿಬೇಡಿ, ಡ್ಯಾಮ್ ನೀರು ನಂಬೇಡಿ ಅಂತ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಂಬಳಕ್ಕೆ 8 ಕೋಟಿ ಖರ್ಚು ಮಾಡೋದು ಎಷ್ಟು ಸರಿ? ಇದು ಅವರಿಗೆ ಬಿಟ್ಟಿರುವ ವಿಚಾರ. ಈ ಹಿಂದೆ ಬರ ಸಂದರ್ಭದಲ್ಲಿ ಸರಳ ಹಾಗೂ ಸಂಪ್ರದಾಯ ದಸರಾ ಆಚರಣೆ ಮಾಡುತ್ತಾ ಬಂದಿದ್ದಾರೆ. ಬರ ಎದು ರಾದರೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಿ ಎಂದು ಹೇಳಿದರು.
ನಮ್ಮ ತಕ್ಷಣದ ಮತ್ತು ಸಾಮೂಹಿಕ ಗಮನವು ಮೈಸೂರು ದಸರಾದ ಮೂಲ ಸ್ವರೂಪವನ್ನು ಮತ್ತಷ್ಟು ಬಲಪಡಿಸುವುದರ ಕಡೆಗೆ ಇರಬೇಕಾಗಿದೆ. ಪ್ರಸ್ತುತ ದಸರಾ ಮಹೋತ್ಸವದ ಸಂಘಟನೆಯಲ್ಲಿ ಇನ್ನೂ ಹಲವು ಆಡಳಿತಾತ್ಮಕ ಲೋಪದೋಷಗಳು, ಮೂಲಸೌಕರ್ಯಗಳ ಕೊರತೆ ಹಾಗೂ ವ್ಯವಸ್ಥಿತ ಸವಾಲುಗಳು ಎದುರಾಗುತ್ತಿವೆ. ಸರ್ಕಾರ ಮತ್ತು ದಸರಾ ಉನ್ನತ ಮಟ್ಟದ ಸಮಿತಿಯು ಮೊದಲು ಈ ಆಂತರಿಕ ಸವಾಲುಗಳನ್ನು ಬಗೆಹರಿಸಲು ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



