RSS ಗೆ ಬಿಗ್ ಶಾಕ್: ನಾನು ಇರೋವರೆಗೂ ರಾಜ್ಯದಲ್ಲಿ ಪಥಸಂಚಲನಕ್ಕೆ ಅನುಮತಿ ಕಡ್ಡಾಯ; ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಅವಕಾಶ ಸಿಕ್ಕಾಗಲೆಲ್ಲಾ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಸಂಘಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.
ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕರ್ನಾಟಕ ಸರ್ಕಾರದ ನಡುವೆ ಮತ್ತೊಂದು ಹೊಸ ಸಮರ ಆರಂಭವಾಗುವ ಎಲ್ಲ ಲಕ್ಷಣಗಳೂ ಗೋಚರಿಸಿವೆ.
ಕಲಬುರಗಿಯ ಮಾತನಾಡಿದ ಪ್ರಿಯಾಂಕ್ ಖರ್ಗೆ, ನಾನು ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು ಲೇವಡಿ ಮಾಡಿದ್ದಾರೆ.
ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರು ನನ್ನ ವೈಯಕ್ತಿಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಯಾರನ್ನ ಮದುವೆಯಾಗಿದ್ದಾನೆ? ಆತನ ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ ಅಥವಾ ಬೆಳ್ಳಗಿದ್ದಾನಾ? ಎಂದು ಕೆದಕುತ್ತಿದ್ದಾರೆ.
ಅವರು ಎಷ್ಟೇ ಕೆದಕಿದರೂ ನಾನು ಹೆದರುವ ವ್ಯಕ್ತಿಯಲ್ಲ. ನನ್ನ ಬಣ್ಣದ ಬಗ್ಗೆ ಮಾತನಾಡುವವರಿಗೆ ನನ್ನ ಕೆಲಸಗಳೇ ಉತ್ತರ ನೀಡುತ್ತವೆ ಎಂದು ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



