ರಾಜ್ಯ

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ (ಜೂನ್ 6) ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
ತೇಜಸ್ವಿನಿ
Published On :

​ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಾಣಾವರ ಸಮೀಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ ನಿನ್ನೆ ಮಧ್ಯಾಹ್ನ ಕಾಲೇಜಿನಿಂದ ಹೊರಟಿದ್ದಳು. ತಾನು ಸದಾಶಿವನಗರದ ಸ್ಯಾಂಕಿ ಕೆರೆ ಬಳಿ ಹೋಗುತ್ತಿದ್ದು, ಸಾಯುವುದಾಗಿ ಸ್ನೇಹಿತನಿಗೆ ಮೆಸೇಜ್ ಮಾಡಿದ್ದಳು.

ಆತ ತೇಜಸ್ವಿನಿಯ ತಾಯಿಗೆ ಮೆಸೇಜ್ ಫಾರ್ವರ್ಡ್ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ತಾಯಿ ಸದಾಶಿವನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ತಡರಾತ್ರಿಯವರೆಗೆ ಹುಡುಕಾಟ ನಡೆಸಿದ್ದರು.

ಆದರೆ ಇಂದು‌ ಬೆಳಗ್ಗೆ ಸ್ಯಾಂಕಿ ಕೆರೆಯಲ್ಲಿ ತೇಜಸ್ವಿನಿಯ ಮೃತದೇಹ ಪತ್ತೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಸೋಮವಾರ ಸಂಜೆ 4 ರಿಂದ 6 ಗಂಟೆಯವರೆಗೆ ಕೆರೆ ಆವರಣದಲ್ಲಿ ಓಡಾಡಿಕೊಂಡಿದ್ದ ತೇಜಸ್ವಿನಿ ತಡರಾತ್ರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.