ಕಲಬುರಗಿಗೆ ಸಿಎಂ ಭೇಟಿ: ಭದ್ರತಾ ಕರ್ತವ್ಯದಲ್ಲಿದ್ದ ಕಾನ್ಸ್‌ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!
ಮುಖ್ಯಮಂತ್ರಿಯವರ ನಗರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿರುವ ಕಾನ್‌ಸ್ಟೆಬಲ್ ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಲಬುರಗಿ: ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಪೊಲೀಸ್ ವಾಹನದೊಳಗೆ ತಮ್ಮ ಸರ್ವಿಸ್ ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ನಗರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿರುವ ಕಾನ್‌ಸ್ಟೆಬಲ್ ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳವಾರ ರಾತ್ರಿ ಸುಮಾರು 9.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.
ಪೊಲೀಸರು ತಿಳಿಸಿದಂತೆ, ಅವರು ಇತರ ಪೊಲೀಸರೊಂದಿಗೆ ಭದ್ರತಾ ವ್ಯವಸ್ಥೆಯ ಭಾಗವಾಗಿದ್ದರು.
ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌ಡಿ ಪ್ರಕಾರ, ಸುಮಾರು ಮೂರು-ನಾಲ್ಕು ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಕಲಬುರಗಿಗೆ ವರ್ಗಾವಣೆಗೊಂಡಿದ್ದ ಶಿವಕುಮಾರ್, ಪೊಲೀಸ್ ವಾಹನದೊಳಗೆ ತಮ್ಮ '303' ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಶಿವಕುಮಾರ್ ಮಾನಸಿಕ ಒತ್ತಡದಲ್ಲಿದ್ದರು. ಆದಾಗ್ಯೂ, ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಬ್ಯಾಲಿಸ್ಟಿಕ್ ಮತ್ತು ವಿಧಿವಿಜ್ಞಾನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು.
ಸಾಕ್ಷ್ಯಾಧಾರಗಳನ್ನು ಹಾಳು ಮಾಡುವುದನ್ನು ತಪ್ಪಿಸಲು ಸ್ಥಳವನ್ನು ಸಂರಕ್ಷಿಸಲಾಗಿದೆ ಮತ್ತು ಕುಟುಂಬದವರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಿದರು. ಸದ್ಯ ಘಟನೆ ಬ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



