ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯಾದ್ಯಂತ 10 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!
ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ರಾಯಚೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿರುವ ಈ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ 10 ಸರ್ಕಾರಿ ಅಧಿಕಾರಿಗಳ ವಿರುದ್ಧ ರಾಜ್ಯ ಲೋಕಾಯುಕ್ತವು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದೆ.
ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ರಾಯಚೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿರುವ ಈ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಾಯುಕ್ತದ ಪ್ರಕಾರ, ದಾಳಿಗೆ ಒಳಗಾದ ಅಧಿಕಾರಿಗಳ ವಿವರ ಹೀಗಿದೆ: ರಾಯಚೂರಿನ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ನ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಚಿತ್ರದುರ್ಗದ ಕೃಷಿ ಇಂಜಿನಿಯರಿಂಗ್ (ತೋಟಗಾರಿಕೆ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಂ. ಶಂಕರ್, ಚಿತ್ರದುರ್ಗದ ಜಲಾನಯನ ಅಭಿವೃದ್ಧಿ ಇಲಾಖೆಯ ವಲಯ ಅರಣ್ಯಾಧಿಕಾರಿ ಬಿ.ಎಚ್ ದುಗ್ಗಪ್ಪ, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ನರೇಂದ್ರ ಕುಮಾರ್, ಇವರಲ್ಲದೆ ಕೆಆರ್‌ಐಡಿಎಲ್ (KRIDL) ಬೆಂಗಳೂರು ವಲಯ ಕಚೇರಿಯ ಅಧೀಕ್ಷಕ ಅಭಿಯಂತರ ಪ್ರವೀಣ್ ಬಿ. ಶ್ರೀಹರಿ ಮತ್ತು ಬೆಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪ ನಿರ್ದೇಶಕರಾದ ಡಿ.ಆರ್. ಪುಷ್ಪ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ತುಮಕೂರಿನ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಎನ್. ಮಧುಸೂದನ್, ಬೆಂಗಳೂರು ದಕ್ಷಿಣದ ಕುಂಬಳಗೋಡು ಪಂಚಾಯತ್‌ನ ಪಿಡಿಒ (PDO) ತಿಮ್ಮೆಗೌಡ, ಶಿವಮೊಗ್ಗದ ಸಂಶೋಧನಾ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರಣ್ ಅಂಗಡಿ ಹಾಗೂ ಕಲಬುರಗಿಯ ಜೆಸ್ಕಾಂ (GESCOM)ನ ಸಹಾಯಕ ಕಾರ್ಯಪಾಲಕ ಅಭಿಯಂತರ (ವಿದ್ಯುತ್) ಅಮೃತ್ ರಾವ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



