ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಿಸಿ ಸರ್ಕಾರ ಆದೇಶ!
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR)ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಗಾಯತ್ರಿ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ (Media Secretaries) ಹಿರಿಯ ಪತ್ರಕರ್ತ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR)ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಗಾಯತ್ರಿ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ನೇಮಕಗೊಂಡ ಪ್ರಮುಖರು ಮತ್ತು ಹುದ್ದೆಗಳ ವಿವರ ಇಂತಿದೆ: ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಈ ಕೆಳಗಿನ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ನೇಮಿಸಿ ಆದೇಶಿಸಲಾಗಿದೆ.
ಹೆಸರು ಮತ್ತು ವಿವರ ನೇಮಿಸಲಾದ ಹುದ್ದೆ
1. ಪಿ. ತ್ಯಾಗರಾಜ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ - 1
2. ಆರ್. ಜಯಪ್ರಕಾಶ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ - 2
3. ರಾಘವೇಂದ್ರ ಭಟ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ - 3

ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಇವರು ಮುಖ್ಯವಾಹಿಯ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಹಾಗೂ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದಲ್ಲಿನ ಸುಳ್ಳು ಸುದ್ದಿಗಳ ಹಾವಳಿಯ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



