ಬೆಂಗಳೂರು: ಅಪ್ಪ ಕ್ಷಮಿಸು, ಈ ಅವಮಾನ ಸಹಿಸಿಕೊಂಡು ಬದುಕಲಾರೇ..; ಶಿಕ್ಷಕಿ ಬೈದರೆಂದು ಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು!
ಬೆಂಗಳೂರು ನಗರ ಆನೇಕಲ್ ತಾಲೂಕಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕಿ ಬೈದಿದ್ದಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಆನೇಕಲ್: ಬೆಂಗಳೂರು ನಗರ ಆನೇಕಲ್ ತಾಲೂಕಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕಿ ಬೈದಿದ್ದಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ ಪೋಷಕರು ಎದ್ದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಡೆಟ್ ನೋಟ್ ನಲ್ಲಿ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದ್ದಾರೆ. ವಿದ್ಯಾರ್ಥಿಗಳ ಮುಂದೆ ನನಗೆ ಅವಮಾನವಾಗಿದ್ದು, ನನಗೆ ಬದುಕಲು ಆಗುತ್ತಿಲ್ಲ. ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಎಂದು ಬರೆದು ವಿದ್ಯಾರ್ಥಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ವಿದ್ಯಾರ್ಥಿ ಸಾವಿನ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಕಿರುಕುಳದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



