GBA ವ್ಯಾಪ್ತಿಯಲ್ಲಿ ಪ್ರತ್ಯೇಕ SIR: ರಾಜ್ಯ ಸರ್ಕಾರ, SEC, ECIಗೆ ಹೈಕೋರ್ಟ್ ನೋಟಿಸ್
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳು ಜುಲೈ 15ರೊಳಗೆ ಆಕ್ಷೇಪಣೆಗಳ ಹೇಳಿಕೆ ಸಲ್ಲಿಸಬೇಕು ಎಂದು ಸೂಚಿಸಿ ನೋಟಿಸ್ ನೀಡಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ರಾಜ್ಯ ಚುನಾವಣಾ ಆಯೋಗ (SEC) ನಡೆಸುತ್ತಿರುವ ಪ್ರತ್ಯೇಕ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ (SEC) ಹಾಗೂ ಭಾರತದ ಚುನಾವಣಾ ಆಯೋಗಕ್ಕೆ (ECI) ನೋಟಿಸ್ ಜಾರಿಗೊಳಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳು ಜುಲೈ 15ರೊಳಗೆ ಆಕ್ಷೇಪಣೆಗಳ ಹೇಳಿಕೆ ಸಲ್ಲಿಸಬೇಕು ಎಂದು ಸೂಚಿಸಿ ನೋಟಿಸ್ ನೀಡಿದೆ.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರಾದ ವಿವೇಕ್ ಎಂ., ಶ್ರೀನಾಥ್ ಎಂ., ಟಿ. ಮಂಜುನಾಥ, ಸತೀಶ್ ಟಿ.ಆರ್. ಹಾಗೂ ಆನಂದಮೂರ್ತಿ ಕೆ.ಆರ್. ಅವರು ಈ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ, ಜೂನ್ 19ರಂದು ಹೊರಡಿಸಿದ ಆದೇಶದ ಆಧಾರದಲ್ಲಿ ರಾಜ್ಯ ಚುನಾವಣಾ ಆಯೋಗವು ಪ್ರತ್ಯೇಕ SIR ನಡೆಸಲು ಯಾವುದೇ ಕಾನೂನುಬದ್ಧ ಅಧಿಕಾರ ಹೊಂದಿಲ್ಲ ಎಂದು ವಾದಿಸಲಾಗಿದೆ.
ಭಾರತದ ಚುನಾವಣಾ ಆಯೋಗ ಈಗಾಗಲೇ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸಿದ್ದು, ಕರ್ನಾಟಕವನ್ನು ಅದರ ಮೂರನೇ ಹಂತದಲ್ಲಿ ಸೇರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ಜೂನ್ 16ರಂದು ಚುನಾವಣಾ ಆಯೋಗವು ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಸ್ಥಿರಗೊಳಿಸಿದ್ದು (Freeze), ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವಂತೆ ವೇಳಾಪಟ್ಟಿಯನ್ನೂ ಪ್ರಕಟಿಸಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ SIR ನಡೆಸುತ್ತಿರುವ ಕ್ರಮವನ್ನು ರದ್ದುಪಡಿಸುವಂತೆ ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



