Rain Forecast: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ! ಎಚ್ಚರಿಕೆ ನೀಡಿದ IMD
Rain Alert: ರಾಜ್ಯದ 10 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ. ಗುಡುಗು ಸಹಿತ ಮಳೆಗೆ ಸಿದ್ಧರಾಗುವಂತೆ ಸೂಚನೆ

ಬೆಂಗಳೂರು: ಸರಿಯಾಗಿ 15 ದಿನದ ಹಿಂದೆ ರಾಜ್ಯದಲ್ಲಿ ಮಳೆ (Rain) ಆಗುತ್ತಿಲ್ಲ ಎನ್ನುವ ಕೂಗು ರಾಜ್ಯದ ಎಲ್ಲಾ ಭಾಗಗಳಿಂದಲೂ ಕೇಳಿ ಬರುತಿತು. ಆದರೆ, ಇದೀಗ ಭಾರತೀಯ ಹವಾಮಾನ ಇಲಾಖೆಯು (Indian Meteorological Department - IMD) ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದೆ. ಅದರಲ್ಲೂ, ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಸಿಡಿಲು ಮತ್ತು ಪ್ರಬಲ ಗಾಳಿಯೊಂದಿಗೆ ಮಳೆ ಬರಲಿದೆ ಎಂದು ಮುನ್ಸೂಚನೆ (Rain Forecast) ನೀಡಿದೆ. ಆ ಕುರಿತ ವರದಿ ಇಲ್ಲಿದೆ.
ಯಾವ ಜಿಲ್ಲೆಗಳಲ್ಲಿ ಮಳೆ?
IMD ನೀಡಿರುವ ಮಾಹಿತಿಯ ಪ್ರಕಾರ ನಾಳೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.
ಮುಂದುವರೆದು, IMD ಕೆಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು. ನದಿ ಮತ್ತು ಜಲಾಶಯಗಳ ಸಮೀಪ ಹೋಗಬಾರದು. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇದರೊಂದಿಗೆ, ರೈತರು ತಮ್ಮ ಬೆಳೆಗಳಿಗೆ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜೊತೆಗೆ ರಸ್ತೆಯಲ್ಲಿ ಪ್ರಯಾಣಿಸುವಾಗ ಮರ ಮತ್ತು ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬಾರದು ಎಂದು IMD ಸಲಹೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



