ಗದಗ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ನೆರೆಮನೆ ವ್ಯಕ್ತಿ ಬಂಧನ
ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ದಾಖಲಿಸಿದ ದೂರಿನ ಆಧಾರದ ಮೇಲೆ ರೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಪ್ಪ ಮದರ್ ನನ್ನು ಬಂಧಿಸಿದ್ದಾರೆ.

ಗದಗ: ರೋಣ ತಾಲ್ಲೂಕಿನ ಅರಹುಣಸಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ 19 ವರ್ಷದ ಬಾಲಕಿಯ ಮೇಲೆ ಆಕೆಯ ನೆರೆಮನೆ ವ್ಯಕ್ತಿಯೊಬ್ಬ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.
ಆಕೆಯ ಪೋಷಕರು ಕೆಲಸಕ್ಕೆ ಮನೆಯಿಂದ ಹೋದಾಗ ಆತ ಬಾಲಕಿಗೆ ಚಾಕೊಲೇಟ್ ನೀಡುವುದಾಗಿ ಆಮಿಷ ಒಡ್ಡುತ್ತಿದ್ದ. ಬಾಲಕಿಯ ಪೋಷಕರು ಆಕೆ ಗರ್ಭಿಣಿಯಾಗಿದ್ದಾಳೆಂದು ಪತ್ತೆ ಹಚ್ಚಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ದಾಖಲಿಸಿದ ದೂರಿನ ಆಧಾರದ ಮೇಲೆ ರೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಪ್ಪ ಮದರ್ ನನ್ನು ಬಂಧಿಸಿದ್ದಾರೆ.
ಬಾಲಕಿ ಗರ್ಭಿಣಿಯಾಗಿದ್ದಾಳೆಂದು ತಿಳಿದಾಗ ಗರ್ಭಪಾತ ಮಾಡಿಸಲು ದುರ್ಗಪ್ಪ ಮದರ್ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯರು ಗರ್ಭಪಾತ ಮಾಡಲು ನಿರಾಕರಿಸಿದಾಗ, ದುರ್ಗಪ್ಪ ಈ ವಿಷಯವನ್ನು ಬಹಿರಂಗಪಡಿಸದಂತೆ ಆಕೆಯ ತಾಯಿಗೆ ಬೆದರಿಕೆ ಹಾಕಿದರು ಮತ್ತು ತನ್ನ ಅಪರಾಧವನ್ನು ಮರೆಮಾಡಲು 50,000 ರೂ.ಗಳನ್ನು ನೀಡಿದ್ದ ಎಂದು ತಿಳಿಸಿದ್ದಾರೆ.
ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆ 22 ವಾರಗಳ ಗರ್ಭಿಣಿ ಎಂದು ಕಂಡುಬಂದಿದೆ" ಎಂದು ರೋಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೋಣ ಪೊಲೀಸ್ ಅಧಿಕಾರಿಯೊಬ್ಬರು ಮದರ್ ಬಂಧನವನ್ನು ದೃಢಪಡಿಸಿದ್ದಾರೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಹಾಸನ: ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೊಣನೂರು ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಸಣ್ಣಸ್ವಾಮಿ (40) ಸಂತ್ರಸ್ತೆಯ ಮನೆಯ ಪಕ್ಕದ ಮನೆಯ ನಿವಾಸಿ.
ಆಕೆಯ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ಸಣ್ಣಸ್ವಾಮಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂಜೆ ಪೋಷಕರು ಮನೆಗೆ ಹಿಂತಿರುಗಿದಾಗ ಮಗು ನಿರಂತರವಾಗಿ ಅಳುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ತಿಳಿದ ನಂತರ ಮಗುವಿನ ಪೋಷಕರು ಸಣ್ಣಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ.
ಮಗು ಅರಕಲಗೂಡಿನ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ವಿಚಾರಣೆಯ ಸಮಯದಲ್ಲಿ, ಸಣ್ಣಸ್ವಾಮಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಕೊಣನೂರು ಪೊಲೀಸರು ಆತನನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



