ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!
ಇಂದು ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಅವರ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಅವರ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ.
ಮೃತರನ್ನು ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ್(20) ಮತ್ತು ಜಶ್ವಂತ(18) ಎಂದು ಗುರುತಿಸಲಾಗಿದ್ದು, ತಂದೆ ರಾಘವೇಂದ್ರ(41) ಅವರಿಗೆ ಗಂಭೀರ ಗಾಯಗಳಾಗಿವೆ.
ಈ ಕುಟುಂಬವು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಶಿರಡಿಗೆ ಹೊರಟಿದ್ದರು. 20 ವರ್ಷದ ಮಗ ಹರಿವೆಂಕಟರಾಮ್ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



