ಸದಾ ಬಾಯಿಗೆ ಬಂದಂತೆ ಮಾತನಾಡುವ 'ಪ್ರಿಯಾಂಕ್ ಖರ್ಗೆ ಹುಚ್ಚ' ಎಂದ ಶಾಸಕ ಜನಾರ್ದನ ರೆಡ್ಡಿ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಾಏಕಿ ಇವರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದು, ಆದರೆ ಇವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಗಂಗಾವತಿ: ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಬ್ಬ ಹುಚ್ಚ ಎಂದು ಶಾಸಕ ಜನಾರ್ದನ ರೆಡ್ಡಿ ಶನಿವಾರ ಟೀಕಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಸರ್ಕಾರದಲ್ಲಿ ಸಂಪೂರ್ಣ ನಿಶಕ್ತರಾಗಿದ್ದಾರೆ. ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದನ್ನು ಬಿಟ್ಟು, ಕೇವಲ ಮಾಧ್ಯಮಗಳಲ್ಲಿ ಸದಾ ಸುದ್ದಿಯಲ್ಲಿರಬೇಕು ಎನ್ನುವ ಉದ್ದೇಶದಿಂದ ಪ್ರತಿ ದಿನ ಆರ್‌ಎಸ್ಎಸ್ ಸಂಘಟನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಾಏಕಿ ಇವರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದು, ಆದರೆ ಇವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.
ಇನ್ನು ಹದಿನೈದು ದಿನಗಳ ಕಾಲ ಇವರ ನಡವಳಿಕೆಯನ್ನು ಗಮನಿಸಿ, ತದನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಇವರ ಮಾನಸಿಕ ಸ್ಥಿತಿ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ತಪಾಸಣೆ ಒಳಪಡಿಸಬೇಕಿದೆ ಎಂದು ಲೇವಡಿ ಮಾಡಿದರು.
ದೇಶದಲ್ಲಿ ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿ, ಮಲ್ಲಿಕಾರ್ಜನ ಖರ್ಗೆ ಅವರಿಗೇ ಏನೂ ಮಾಡಲು ಆಗಲಿಲ್ಲ. ಈಗ ಪ್ರಿಯಾಂಕ್ ಖರ್ಗೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



