ರಾಜ್ಯ

ರಾಜ್ಯದಲ್ಲಿ ಬರ-ಪ್ರವಾಹ: ಜೆಡಿಎಸ್ ನಿಂದ ನಾಲ್ಕು ಅಧ್ಯಯನ ತಂಡ ರಚನೆ

ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ರಾಜ್ಯದಲ್ಲಿ ಬರ-ಪ್ರವಾಹ: ಜೆಡಿಎಸ್ ನಿಂದ ನಾಲ್ಕು ಅಧ್ಯಯನ ತಂಡ ರಚನೆ
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ರಾಜ್ಯದಲ್ಲಿ 2026ರ ಮುಂಗಾರು ವೈಪಲ್ಯದಿಂದಾಗಿ ಒಂದೆಡೆ ಭಾರಿ ಮಳೆ-ಪ್ರವಾಹದ ಹಾನಿಯಾದರೆ, ಮತ್ತೊಂದೆಡೆ ಶೇ. 40ರಿಂದ ಶೇ. 43 ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ.

ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಹಾವೇರಿ ಮತ್ತು ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅದೇ ಸಮಯದಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ" ಎಂದು ಅವರು ಹೇಳಿದರು. ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ ಬಾಬು ಸಿ.ಬಿ., ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್‌ ಅವರನ್ನೊಳಗೊಂಡಂತೆ ಅಧ್ಯಯನ ತಂಡಗಳು, ಆಯಾ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು / ಮಾಜಿ ಸಚಿವರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಿ ತಳಮಟ್ಟದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕರಾವಳಿ-ಮಲೆನಾಡು ವಿಭಾಗ: ವಿಧಾನಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ (ಅಧ್ಯಕ್ಷರು)

ಬೆಂಗಳೂರು ವಿಭಾಗ: ಕೋಲಾರ ಸಂಸದ ಎಂ. ಮಲ್ಲೇಶ್‌ ಬಾಬು (ಅಧ್ಯಕ್ಷರು)

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ವಿಭಾಗಗಳು: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, (ಅಧ್ಯಕ್ಷರು)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.