ರಾಜ್ಯ

ಬಾಗೇಪಲ್ಲಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗಾಗಿ ಪೊಲೀಸರ ಹುಡುಕಾಟ!

ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಗೇಪಲ್ಲಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗಾಗಿ ಪೊಲೀಸರ ಹುಡುಕಾಟ!
ಸಾಂದರ್ಭಿಕ ಚಿತ್ರ
Published On :

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಗೋಲೂರು ಹೋಬಳಿಯ ಗ್ರಾಮವೊಂದರಲ್ಲಿ 5 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರದ ಘಟನೆ ನಡೆದಿದೆ. ಪೋಷಕರ ದೂರಿನ ಮೇರೆಗೆ ಬಾಗೇಪಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೋಷಕರು ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ನಂತರ ಘಟನೆ ಬೆಳಕಿಗೆ ಬಂದಿದ್ದು, ವೈದ್ಯರು ಲೈಂಗಿಕ ದೌರ್ಜನ್ಯವನ್ನು ದೃಢಪಡಿಸಿದ್ದಾರೆ.

ಈ ಸಂಬಂಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಿ.ಎನ್. ಸತ್ಯನಾರಾಯಣರೆಡ್ಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎ.ಜಿ. ಸುಧಾಕರ್, ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.