ರಾಜ್ಯ

ತುಮಕೂರು: ಇಷ್ಟವಿಲ್ಲದಿದ್ದರೂ ಸೋದರಮಾವನ ಜೊತೆ ಮದುವೆ; ವಿವಾಹಿತೆ ಆತ್ಮಹತ್ಯೆ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು!

ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.

ತುಮಕೂರು: ಇಷ್ಟವಿಲ್ಲದಿದ್ದರೂ ಸೋದರಮಾವನ ಜೊತೆ ಮದುವೆ; ವಿವಾಹಿತೆ ಆತ್ಮಹತ್ಯೆ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು!
ಮೃತ ಗಿರೀಶ್, ಶರಣ್ಯ
Published On :

ತುಮಕೂರು: ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಇನ್ನು ಪತ್ನಿಯ ಸಾವಿನ ಸುದ್ದಿ ತಿಳಿದೂ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತರನ್ನು 20 ವರ್ಷದ ಶರಣ್ಯ ಮತ್ತು 28 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದಾಗಿನಿಂದಲೂ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ನಿತ್ಯ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಶರಣ್ಯ ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಗಿರೀಶ್ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.