ರಾಜ್ಯ

ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್; HD ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

Supreme Court Notice to H.D. Revanna: ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಶಾಸಕ ಹೆಚ್. ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್; HD ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಹೆಚ್ ಡಿ ರೇವಣ್ಣ — Online Desk
Published On :

ನವದೆಹಲಿ: ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ (JDS MLA) ಹೆಚ್. ಡಿ. ರೇವಣ್ಣಗೆ ( H.D. Revanna) ಸುಪ್ರೀಂ ಕೋರ್ಟ್ (Supreme Court) ನೋಟಿಸ್ (Notice) ಜಾರಿ ಮಾಡಿದೆ. ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Sexual Assault Case) ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ (Karnataka High Court) ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರೇವಣ್ಣಗೆ ನೋಟಿಸ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದೇನು?

ಕರ್ನಾಟಕ ಹೈಕೋರ್ಟ್, ಈ ಹಿಂದೆ ರೇವಣ್ಣ ಮೇಲಿದ್ದ, ಮನೆ ಕೆಲಸದಾಕೆಯ ಮೇಲಿನ ಹಲ್ಲೆ ಪ್ರಕರಣವನ್ನು ರದ್ದುಗೊಳಿಸಿ, ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಮಾತ್ರ ಅನುಮತಿ ನೀಡಿ, ಆರೋಪಿಯ ವಿರುದ್ಧದ ಚಾರ್ಜ್‌ಗಳನ್ನು ಬದಲಾಯಿಸಿತ್ತು. ಆದರೆ, ಹೈಕೋರ್ಟ್‌ನ ಈ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ನ ನ್ಯಾ. ಪಾರ್ದಿವಾಲಾ ನೇತೃತ್ವದ ಪೀಠವು, ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.

ಮುಂದುವರೆದು, ಮಗ ಪ್ರಜ್ವಲ್ ರೇವಣ್ಣ ಮೇಲಿರುವುದು ಅತ್ಯಾಚಾರ ಆರೋಪ, ಅವರ ತಂದೆ ರೇವಣ್ಣ ಮೇಲೂ ಬೇರೆ ಆರೋಪಗಳಿವೆ. ಇಬ್ಬರ ಮೇಲೂ ಬೇರೆ ಬೇರೆ ಆರೋಪಗಳಿರುವಾಗ, ಹೈಕೋರ್ಟ್ ಈ ರೀತಿ ಚಾರ್ಜ್‌ಗಳನ್ನು ಬದಲಾಯಿಸಿದ್ದು ಹೇಗೆ? ಎಂದು ವಿವರಣೆ ಕೇಳಿದೆ.

ರಾಜ್ಯ ಸರ್ಕಾರಕ್ಕೂ ಸುಪ್ರೀಂ ಚಾಟಿ

ಮುಂದಿನ‌ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವಿಸ್ತೃತವಾಗಿ ವಿಚಾರಣೆ ಮಾಡಲಿದೆ ಎಂದ ನ್ಯಾ. ಪಾರ್ದಿವಾಲಾ ಪೀಠವು, ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದ ಹಲವು ತಿಂಗಳ ನಂತರ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರವನ್ನ ತರಾಟೆ ತಗೆದುಕೊಂಡಿದೆ. ಪ್ರಕರಣ ರದ್ದು ಮಾಡಿ, ಹೈಕೋರ್ಟ್ 2025ರ ಡಿಸೆಂಬರ್ ನಲ್ಲಿ ತೀರ್ಪು ನೀಡಿತ್ತು, ಆದ್ರೆ ಸರ್ಕಾರ ಅರ್ಜಿ ಸಲ್ಲಿಸಲು ಇಷ್ಟು ಸಮಯ ಯಾಕೆ ತಗೆದು ಕೊಂಡಿತು ಎಂದು ಪ್ರಶ್ನಿಸಿದೆ.

ಏನಿದು ಪ್ರಕರಣ?

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.