ಬಾಗಲಕೋಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಗಲಕೋಟೆ: ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಯಲ್ಲಿ ಎಲ್‌ಕೆಜಿಯಿಂದ 7ನೇ ತರಗತಿಯವರೆಗಿನ ಒಟ್ಟು 51 ಮಕ್ಕಳು ಬಿಸಿಯೂಟ ಮಾಡಿದ್ದು, ಅವರಲ್ಲಿ 14 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಊಟ ಮಾಡಿದ ಕೆಲವೇ ಸಮಯದ ಬಳಿಕ ಮಕ್ಕಳಿಗೆ ವಾಂತಿಯಾಗಿದ್ದು, ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ವಿದ್ಯಾರ್ಥಿಗಳನ್ನು ಮುಧೋಳದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.
ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.
ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಕಲಬುರಗಿಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪರಾದ ನಜೀಮಾ ಬೇಗಂ ಮತ್ತು ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



