ರಾಜ್ಯ

'ಜೀವನಾಧಾರವಾಗಿರುವ ಭೂಮಿ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಯಾರ ಉದ್ಧಾರಕ್ಕೆ? ಮಹಿಳೆಯರ ಪೊರಕೆ ಸೇವೆ ಸರ್ಕಾರಕ್ಕೆ ಎಚ್ಚರಿಕೆ'

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

'ಜೀವನಾಧಾರವಾಗಿರುವ ಭೂಮಿ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಯಾರ ಉದ್ಧಾರಕ್ಕೆ? ಮಹಿಳೆಯರ ಪೊರಕೆ ಸೇವೆ ಸರ್ಕಾರಕ್ಕೆ ಎಚ್ಚರಿಕೆ'
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Published On :

ನವದೆಹಲಿ: ಬಿಡದಿ ಟೌನ್‌ಶಿಪ್ ಗೆಂದು ಜಂಟಿ ಮಾಪನ ಸಮೀಕ್ಷೆಗೆ ಹೋದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಿಂದ ಥಳಿಸಿರುವ ಘಟನೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಬಿಡದಿ ಟೌನ್‌ಶಿಪ್ ನೆಪದಲ್ಲಿ ಅನ್ನದಾತರ ಜಮೀನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಅತಿರೇಕದ್ದಾಗಿದೆ. ಹಾಗಾಗಿ, ರೈತ ಮಹಿಳೆಯರು ಪೊರಕೆ ಕೈಗೆ ತೆಗೆದುಕೊಂಡಿದ್ದಾರೆ. ಸರ್ಕಾರ ಇನ್ನಾದರೂ ಕಣ್ತೆರೆದುಕೊಳ್ಳಬೇಕಿದೆ.

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ರೈತರ ಬಗ್ಗೆ ಕಾಳಜಿಯೇ ಇಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಮುನ್ನುಗ್ಗುತ್ತಿರುವುದು ದುರಾಡಳಿತದ ಪರಮಾವಧಿ ಎಂದು ಕಿಡಿ ಕಾರಿದ ಜೋಶಿ, ರೈತರ ಒಪ್ಪಿಗೆಯಿಲ್ಲದೆ ಅವರ ಜೀವನಾಧಾರವಾಗಿರುವ ಭೂಮಿಯನ್ನೇ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಅಭಿವೃದ್ಧಿ ಯಾರ ಉದ್ಧಾರಕ್ಕಾಗಿ? ಎಂದು ಪ್ರಶ್ನಿಸಿದ್ದಾರೆ.

ಶಾಂತಿಯುತ ಬದುಕು ನೂಕುತ್ತಿರುವ ರೈತರನ್ನು ಹೆದರಿಸಿ, ಬೆದರಿಸಿ ಜಮೀನು ವಶಪಡಿಸಿಕೊಳ್ಳಲು ಯತ್ನಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಮುಗ್ಧ ರೈತರನ್ನು ಬೆದರಿಸಿ, ಪೊಲೀಸ್ ಬಲ ಬಳಸಿ ಜಮೀನು ಕಿತ್ತುಕೊಳ್ಳಬಹುದು ಎಂದುಕೊಂಡಿದ್ದರೆ ಅದು ಭ್ರಮೆ ಎಂದು ಸರ್ಕಾರಕ್ಕೆ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಇದು ಕೇವಲ ಬಿಡದಿ ರೈತರ ಹೋರಾಟವಲ್ಲ, ರಾಜ್ಯದ ಸಮಸ್ತ ಜನತೆಯ ಆಕ್ರೋಶ. ರೈತರ ಭೂಮಿ ಅವರ ಹಕ್ಕು, ಅವರ ಬೆಂಬಲವಿಲ್ಲದೆ, ಅವರ ಭೂಮಿಯನ್ನು ಕಿತ್ತುಕೊಳ್ಳುವುದು ಸರಿಯಲ್ಲ. ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದೂ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.