ಬೆಳಗಾವಿಯಲ್ಲಿ ಘೋರ ದುರಂತ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ರೈತ ದಂಪತಿ ಸಾವು
ಮೃತ ದಂಪತಿಯನ್ನು ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ(42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ(36) ಎಂದು ಗುರುತಿಸಲಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ, ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಮೃತ ದಂಪತಿಯನ್ನು ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ(42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ(36) ಎಂದು ಗುರುತಿಸಲಾಗಿದೆ.
ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



