ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ನೇಮಕ
ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡಲು ತಕ್ಷಣದಿಂದ ಜಾರಿಗೆ ಬರುವಂತೆ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.
ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡಲು ತಕ್ಷಣದಿಂದ ಜಾರಿಗೆ ಬರುವಂತೆ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಜಿ.ಸಿ. ಚಂದ್ರಶೇಖರ್ ಅವರು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿದ್ದಾರೆ. ಅವರು ಮೂಲತಃ ಹಾಸನದವರು. ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಪಕ್ಷದ ವ್ಯಕ್ತಿಯೆಂದೇ ಗುರುತಿಸಿಕೊಂಡಿದ್ದಾರೆ. ಬೇರೆ ಅಧಿಕಾರದ ಹುದ್ದೆಗಳಿಗಿಂತ, ಪಕ್ಷದ ಕೆಲಸಗಳಿಗಾಗಿ ಹೆಚ್ಚು ದುಡಿದವರು. ಜಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರ ಪಕ್ಷ ನಿಷ್ಠೆಯ ಕಾರಣಕ್ಕಾಗಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಯೂ ನೇಮಿಸಲಾಗಿತ್ತು.


ತೀವ್ರ ವಿರೋಧದ ಬೆನ್ನಲ್ಲೇ ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ ನೇಮಕಾತಿ ವಾಪಸ್: ರಾಜ್ಯ ಸರ್ಕಾರ ಆದೇಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


