GBA: ಬೆಂಗಳೂರಿನಲ್ಲಿ ಜುಲೈ1 ರಿಂದ 10 ರವರೆಗೆ 490 ಕಿ.ಮೀ ಉದ್ದದ ಫುಟ್ ಪಾತ್ ಒತ್ತುವರಿ ತೆರವು!
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 122.62 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಲಾಗಿದೆ.

ಬೆಂಗಳೂರು: ಜುಲೈ 1 ರಿಂದ 10 ರವರೆಗಿನ 10 ದಿನಗಳ ವಿಶೇಷ ಅಭಿಯಾನದ ಸಂದರ್ಭದಲ್ಲಿ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 490.55 ಕಿ.ಮೀ. ಉದ್ದದ ಪಾದಚಾರಿ ಮಾರ್ಗಒತ್ತುವರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತೆರವುಗೊಳಿಸಿದೆ.
ಈ ಕುರಿತ ಮಾಹಿತಿಯನ್ನು ಜಿಬಿಎ ಹಂಚಿಕೊಂಡಿದ್ದು, ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 122.62 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಿದ್ದು, ಉತ್ತರ ನಗರಪಾಲಿಕೆ ವ್ಯಾಪ್ತಿಯಲ್ಲಿ 115.35 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಲಾಗಿದ್ದು, ಎರಡನೇ ಸ್ಥಾನದಲ್ಲಿದೆ.
ಬೆಂಗಳೂರು ದಕ್ಷಿಣ ನಗರಪಾಲಿಕೆಯಲ್ಲಿ 94.01 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲಾಗಿದ್ದರೆ, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 88 ಕಿ.ಮೀ. ಮತ್ತು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 70 ಕಿ.ಮೀ. ಉದ್ದದ ಅತಿಕ್ರಮಣವನ್ನು ತೆರವುಗೊಳಿಸಲಾಗಿದೆ.
ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗಾಗಿ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಅವುಗಳ ನಡುವೆಯೂ ಪುಟ್ ಪಾತ್ ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗಿದ್ದು, ನಿಜವಾದ ಬದಲಾವಣೆಗೆ ಕಠಿಣ ನಿರ್ಧಾರಗಳು ಬೇಕಾಗುತ್ತವೆ. ಜನರ ಬೆಂಬಲದೊಂದಿಗೆ, ಸುರಕ್ಷಿತ, ಸ್ವಚ್ಛ ಮತ್ತು ಹೆಚ್ಚು ವಾಸಿಸಲು ಯೋಗ್ಯವಾದ ಬೆಂಗಳೂರನ್ನು ನಿರ್ಮಿಸಬಹುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಬದಲಾವಣೆಯು ಟೀಕೆಗೆ ಕಾರಣವಾಗಬಹುದು, ಆದರೆ ಅದು ಲಕ್ಷಾಂತರ ಜನರ ಜೀವನವನ್ನು ಸುಧಾರಿಸಿದರೆ ಅದು ಯೋಗ್ಯ ಬೆಲೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



