200 ಬಾರಿ I Will Never Speak Kannada ಬರೆಯುವ ಶಿಕ್ಷೆ: ಖಾಸಗಿ ಶಾಲೆ ವಿರುದ್ಧ ಭುಗಿಲೆದ್ದ ಆಕ್ರೋಶ; Video
ಶಾಲಾ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕ್ರೂರ ಶಿಕ್ಷೆ ನೀಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಗೇರಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಬೆಂಗಳೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕ್ರೂರ ಶಿಕ್ಷೆ ನೀಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಗೇರಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಕನ್ನಡದಲ್ಲಿ ಮಾತನಾಡಿದ್ದಕ್ಕೆ I Will Never Speak Kannada In This Campus ಎಂದು ನೋಟ್‌ಬುಕ್‌ನಲ್ಲಿ ಎಂದು 200 ಬಾರಿ ಬರೆಯುವಂತೆ ಮಗುವಿನ ಮೇಲೆ ಒತ್ತಡ ಹೇರಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ.
ಶಾಲಾ ಸಮಯದಲ್ಲಿ ಮಗು ಕನ್ನಡ ಮಾತನಾಡಿದ್ದಕ್ಕೆ ಶಿಕ್ಷಕರು, ಆತನಿಗೆ ಮಾನಸಿಕ ಹಿಂಸೆ ನೀಡಿ ಇಂಗ್ಲಿಷ್‌ನಲ್ಲೇ ಮಾತನಾಡುವಂತೆ ಬಲವಂತ ಮಾಡಿದ್ದಾರೆ. ಬೆಂಗಳೂರು ಇಂದು ಕೇವಲ ಕನ್ನಡಿಗರಿಗಷ್ಟೇ ಸೀಮಿತವಾಗಿಲ್ಲ, ದೇಶದ ಎಲ್ಲೆಡೆಯಿಂದ ಬಂದು ಜೀವನ ಕಟ್ಟಿಕೊಂಡಿದ್ದಾರೆ. ಕೆಲವು ಆಫೀಸ್‌ಗಳು, ಶಾಲೆ-ಕಾಲೇಜುಗಳಲ್ಲಿ ಕನ್ನಡ ಕಣ್ಮರೆಯಾಗುತ್ತಿದೆ. ನಮ್ಮದೇ ನೆಲದಲ್ಲಿ ಕನ್ನಡ ಮಾತನಾಡಲು ನಮ್ಮ ಮಕ್ಕಳು ಭಯಪಡಬೇಕಾದ ಪರಿಸ್ಥಿತಿ ಬಂದಿದೆಯೇ? ಎಂದು ಕನ್ನಡಪರ ಸಂಘಟನೆಗಳು ಶಾಲೆಯ ವಿರುದ್ಧ ಕಿಡಿಕಾರಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



