ಚಿಕ್ಕಬಳ್ಳಾಪುರ: 'ನಮ್ಮ ಪರವೇ ತೀರ್ಪು ಬರಲಿ'; ಜಡ್ಜ್ ಕುರ್ಚಿ ಮೇಲೆ ಬಿಳಿ ಸಾಸಿವೆ ಕಾಳು ಹಾಕಿ ಬ್ಲ್ಯಾಕ್ ಮ್ಯಾಜಿಕ್, ಮಹಿಳೆ ಅರೆಸ್ಟ್!
ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿರುವ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದ ಕುರ್ಚಿ ಮೇಲೆ ಮಾಟಮಂತ್ರ ನಡೆಸಿದ ಆರೋಪದ ಮೇಲೆ 65 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರ ಪೊಲೀಸರ ಪ್ರಕಾರ, ಮಂಜುಳಾ ಎಂದು ಗುರುತಿಸಲಾದ ಆರೋಪಿಯು ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿ, ನ್ಯಾಯಾಧೀಶರ ಆಸನದ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಚಿಮುಕಿಸುವ ಮೂಲಕ ಮಾಟಮಂತ್ರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಎರಡು ದಿನಗಳ ಹಿಂದೆ ನ್ಯಾಯಾಧೀಶರ ಆಸನದ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಆ ಮಹಿಳೆ ಚಿಮುಕಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ' ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
'ಕರ್ನಾಟಕ ಅಮಾನವೀಯ, ದುಷ್ಟ ಮತ್ತು ವಾಮಾಚಾರ ಪ್ರತಿಬಂಧಕ ಹಾಗೂ ನಿರ್ಮೂಲನೆ ಕಾಯ್ದೆ-2017'ರ ಅಡಿಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ನ್ಯಾಯಾಲಯವು ಮಹಿಳೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



