ರಾಜ್ಯ

ಧಾರವಾಡ: ಡಾಕ್ಟರ್ ಕಿರಣ್ ಬರ್ಬರ ಹತ್ಯೆ, ಮಗನ ಮೇಲೂ ಹಲ್ಲೆ: ವೈದ್ಯ ಪತ್ನಿ ಪೊಲೀಸ್ ವಶಕ್ಕೆ! Video

ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಧಾರವಾಡ: ಡಾಕ್ಟರ್ ಕಿರಣ್ ಬರ್ಬರ ಹತ್ಯೆ, ಮಗನ ಮೇಲೂ ಹಲ್ಲೆ: ವೈದ್ಯ ಪತ್ನಿ ಪೊಲೀಸ್ ವಶಕ್ಕೆ! Video
ವೈದ್ಯ ಕಿರಣ್
Published On :

ಧಾರವಾಡ: ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕರ್ನಾಟಕ ವಿವಿ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದ ವೈದ್ಯ ಕಿರಣ್ ಗೆ ಅವರ ಪತ್ನಿ ಡಾ. ಪ್ರಿಯಾ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಆಕೆಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲ್ಲೆ ವೇಳೆ 10 ವರ್ಷದ ಮಗನಿಗೂ ಚೂರಿ ಇರಿಯಲಾಗಿದ್ದು ಹಲ್ಲೆ ತೀವ್ರ ದಾಳಿಗೆ ಒಳಗಾಗಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.