ರಾಜ್ಯ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ರಾತ್ರಿ ಇದ್ದಕ್ಕಿದ್ದಂತೆ ಏರುಪೇರು ಆಯಿತು.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ-ಪತ್ನಿ ಚೆನ್ನಮ್ಮ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಉಸಿರಾಟದ ಸಮಸ್ಯೆ

ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ರಾತ್ರಿ ಇದ್ದಕ್ಕಿದ್ದಂತೆ ಏರುಪೇರು ಆಯಿತು.

ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ವೈದ್ಯರು, ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ.

ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ ಹಾಗೂ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.