ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video
ವೆಂಕಣ್ಣ ಅವರು ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಬೆಂಗಳೂರು: ಯಲಹಂಕ ನ್ಯೂಟೌನ್ನ ಹೊಯ್ಸಳ ಗ್ರೌಂಡ್ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ನೀರಿನ ಟ್ಯಾಂಕರ್ ಸಾಗಿಸುವ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ನ್ಯಾಯಾಂಗ ಬಡಾವಣೆ ನಿವಾಸಿ ವೆಂಕಣ್ಣ (70) ಎಂದು ಗುರುತಿಸಲಾಗಿದ್ದು, ವೆಂಕಣ್ಣ ಅವರ ಮೊಮ್ಮಕ್ಕಳಾದ ಶ್ರಾವಣಿ (12) ಹಾಗೂ ಚರಿತ್ (5) ಕೂದಲೆಳೆ ಅಂತರದಲ್ಲಿ ಪ್ರಾಣಾಯದಿಂದ ಪಾರಾಗಿದ್ದಾರೆ.
ಮೂಲಗಳ ಪ್ರಕಾರ ವೆಂಕಣ್ಣ ಅವರು ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ರಸ್ತೆ ತಿರುವಿನಲ್ಲಿ ವೆಂಕಣ್ಣ ಮತ್ತು ಅವರ ಮೊಮ್ಮಕ್ಕಳು ಸಾಗುತ್ತಿದ್ದ ದ್ವಿಚಕ್ರವಾಹನ ಟ್ಯಾಂಕರ್ ಹಿಂದಿಕ್ಕಿ ಮುಂದಕ್ಕೆ ಸಾಗಲು ಯತ್ನಿಸಿದಾಗ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ದ್ವಿಚಕ್ರವಾಹನಕ್ಕೆ ಢಿಕ್ಕಿಯಾಗಿದೆ.
ಈ ವೇಳೆ ವೆಂಕಣ್ಣ ಮತ್ತು ಅವರ ಮೊಮ್ಮಕ್ಕಳು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಅದೇ ಸಂದರ್ಭದಲ್ಲಿ ವೆಂಕಣ್ಣ ಅವರ ಮೇಲೆ ನೀರಿನ ಟ್ಯಾಂಕರ್ ಹರಿದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವೆಂಕಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೊಮ್ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಾಹನದಲ್ಲಿದ್ದ ವೆಂಕಣ್ಣ ಅವರ ಇಬ್ಬರು ಮೊಮ್ಮಕ್ಕಳು ಪವಾಡ ಸದೃಶ ಪರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



