ರಾಜ್ಯ

'ಸುರಂಗ ರಸ್ತೆ'ಗೆ ಮರ ಕಡಿಯಲು ತಡೆ: ಹೈಕೋರ್ಟ್ ಆದೇಶ ಸ್ವಾಗತಿಸಿದ ತೇಜಸ್ವಿ ಸೂರ್ಯ; Video

ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು, ರಾಜ್ಯ ಸರ್ಕಾರದ ಸುರಂಗ ಮಾರ್ಗ ಯೋಜನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನಿನ್ನೆ ವಿಚಾರಣೆಗೆ ಹಾಜರಾಗಿದ್ದರು.

'ಸುರಂಗ ರಸ್ತೆ'ಗೆ ಮರ ಕಡಿಯಲು ತಡೆ: ಹೈಕೋರ್ಟ್ ಆದೇಶ ಸ್ವಾಗತಿಸಿದ ತೇಜಸ್ವಿ ಸೂರ್ಯ; Video
ತೇಜಸ್ವಿ ಸೂರ್ಯ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ (Tunnel Road) ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡುವ ಪ್ರಕ್ರಿಯೆಯು ತಾವು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು, ರಾಜ್ಯ ಸರ್ಕಾರದ ಸುರಂಗ ಮಾರ್ಗ ಯೋಜನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನಿನ್ನೆ ವಿಚಾರಣೆಗೆ ಹಾಜರಾಗಿದ್ದರು.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಮುಖ್ಯ ನ್ಯಾಯಮೂರ್ತಿಗಳು, ಈ ಅರ್ಜಿ ಬಾಕಿ ಇರುವ ವಿಚಾರವನ್ನು ಸಾಧ್ಯತೆಯ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ತಿಳಿಸಬೇಕು ಮತ್ತು ಯಾವುದೇ ಹಕ್ಕು (Equity) ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.

ಯಾವುದೇ ಗುತ್ತಿಗೆ ನೀಡಿದರೂ ಅದು ಪಿಐಎಲ್‌ನ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಲಾಲ್‌ಬಾಗ್‌ನಲ್ಲಿ ಮರಗಳನ್ನು ಕಡಿಯದಂತೆ ನೀಡಿದ್ದ ಹಿಂದಿನ ಆದೇಶವನ್ನೂ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ತಿಳಿಸಿದ್ದಾರೆ. ಸುರಂಗ ರಸ್ತೆಗಾಗಿ ಲಾಲ್‌ಬಾಗ್‌ನಲ್ಲಿ ಮರ ಕಡಿಯುವುದಕ್ಕೆ ತಡೆ ನೀಡಿರುವ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಅವರು, 'ಯೋಜನೆ ಕಾನೂನುಬಾಹಿರ, ಪರಿಸರ ಮೌಲ್ಯಮಾಪನವೂ ನಡೆದಿಲ್ಲ' ಎಂದು ಆರೋಪಿಸಿದರು.

ಇದೇ ಪ್ರಕರಣದ ಅಂತಿಮ ವಿಚಾರಣೆ ಆಗಸ್ಟ್‌ 20ರಂದು ನಡೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.