ರಾಜ್ಯ

ತಾರಕಕ್ಕೇರಿದ ಬಿಡದಿ ಟೌನ್‌ಶಿಪ್‌ ಜಟಾಪಟಿ: ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ಸರ್ಕಾರ!

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರಿಗೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ.

ತಾರಕಕ್ಕೇರಿದ ಬಿಡದಿ ಟೌನ್‌ಶಿಪ್‌ ಜಟಾಪಟಿ: ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ಸರ್ಕಾರ!
ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ
Published On :

ಬೆಂಗಳೂರು: ಬಿಡದಿ ಟೌನ್​​ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಲ್ಲದೆ ರೈತರ ಹೋರಾಟ ಸಹ ತೀವ್ರಗೊಂಡಿದೆ.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರಿಗೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ.

ಇತ್ತೀಚಿಗೆ ಬಿಡದಿ ಟೌನ್‌ಶಿಪ್ ವ್ಯಾಪ್ತಿಯ 4 ಕಂದಾಯ ಗ್ರಾಮಗಳಾದ ಬನ್ನಿಗಿರಿ, ಅರಳಾಳುಸಂದ್ರ, ಕೆ.ಜಿ.ಗೊಲ್ಲರಪಾಳ್ಯ, ಹೊಸೂರು ಗ್ರಾಮಗಳ ಜಮೀನು ಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಎರಡನೇ ಹಂತದ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ ಭೂಮಿಯೂ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ವ್ಯಾಪ್ತಿಗೆ ಒಳಪಟ್ಟಿದೆ.

ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಎಚ್‌ಡಿಕೆ ಕುಟುಂಬದ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದು, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ಸರ್ವೇ ನಂಬರ್‌ಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಜಮೀನು ಈ ಯೋಜನೆಗೆ ಒಳಪಟ್ಟಿದೆ. ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿರುವ 31 ಎಕರೆ ಜಮೀನು, ನಿಖಿಲ್ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 4 ಎಕರೆ ಜಮೀನಿಗೂ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಹೊಸೂರಿನ 2,390 ಎಕರೆ 12 ಗುಂಟೆ, ಕೆಜಿ ಗೊಲ್ಲರಪಾಳ್ಯದ ಒಟ್ಟು 315 ಎಕರೆ 36 ಗುಂಟೆ, ಬನ್ನಿಗಿರಿ ಗ್ರಾಮದ 775 ಎಕರೆ 8 ಗುಂಟೆ, ಅರಳಾಳುಸಂದ್ರದ 1,460 ಎಕರೆ 21 ಗುಂಟೆ ಜಮೀನು ಭೂಸ್ವಾಧೀನಕ್ಕೊಳಪಟ್ಟಿದೆ ಎಂದು ನಗರಾಭಿವೃದ್ಧಿ ಇಲಾಖೆ(ಬಿಡಿಎ ಮತ್ತು ಬೆಂಗಳೂರು-1)ಯ ಅಧೀನ ಕಾರ್ಯದರ್ಶಿ ರಾಜೇಶ್ ಎಸ್.ಸೂಳಿಕೇರಿ ಅವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.