ನೆಲಮಂಗಲ ನೈತಿಕ ಪೊಲೀಸ್‌ಗಿರಿ: Hindu ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ, Video!
ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ.

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ. ಡಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ಯುವಕನನ್ನು ಯಶವಂತ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವತಿ ಕೌಸರ್ ಬಾನು ಜೊತೆ ಯಶವಂತ್ ಓಡಾಡುತ್ತಿದ್ದುದ್ದನ್ನು ಗಮನಿಸಿದ ಲಕ್ಕೂರು ಗ್ರಾಮದ ನಿವಾಸಿಗಳಾದ ಸೋಹೇಲ್ ಪಾಷಾ, ಸಯ್ಯದ್ ಕರೀಂ ಮತ್ತು ತಹರೀಕ್ ಪಾಷಾ ಎಂಬುವವರು ಯಶವಂತ್ನನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು.
ಹಲ್ಲೆ ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿಬಿಟ್ಟಿದ್ದರು. ಇದರಿಂದ ತೀವ್ರ ಮನನೊಂದ ಕೌಸರ್ ಬಾನು ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ನೊಂದ ಯುವತಿಯೇ ಹಲ್ಲೆ ಮಾಡಿದವರ ವಿರುದ್ಧ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



