ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು; ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ: ಸೋಮಣ್ಣ ಹೇಳಿಕೆಗೆ ಪರಮೇಶ್ವರ್ ಬೆಂಬಲ
ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ.

ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಏರ್‌ಪೋರ್ಟ್ ನಿರ್ಮಿಸಿ ಎಂದು ಕಳೆದ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ನಮಗೂ ಅನುಕೂಲವಾಗುತ್ತೆ ಎಂದವರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ ಎಂದು ಹೇಳಿದರು.
ತುಮಕೂರು ಲೋಕಸಭಾ ಸಂಸದ ಸೋಮಣ್ಣ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ಅವರಿಗೆ ಪ್ರಸ್ತಾವಿತ ವಿಮಾನ ನಿಲ್ದಾಣವನ್ನು ಸಿರಾದಲ್ಲಿ ಸ್ಥಾಪಿಸಬೇಕೆಂದು ಪತ್ರ ಬರೆದ ಕೆಲವು ದಿನಗಳ ನಂತರ ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ವಿಮಾನಯಾನ ಸಚಿವರಿಗೆ ಸಚಿವ ವಿ. ಸೋಮಣ್ಣ ಪತ್ರ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


