ನೀಟ್ ಜಟಾಪಟಿ: ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ; ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ; Video
ಕೌಂಟರ್ ಆಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಜಟಾಪಟಿ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು, ಇದಕ್ಕೆ ಕೌಂಟರ್ ಆಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ.
ನೀಟ್ ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜಂತರ್ ಮಂತರ್ ನಲ್ಲಿ ಲಾಠಿ ಚಾರ್ಜ್ ನಡೆದಿತ್ತು. ಇದನ್ನು ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಹೋರಾಟ ನಡೆಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಈ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.
ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಿಪಿ ಹರೀಶ್ ಭಾಗಿಯಾಗಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಸ್ಥಳದಲ್ಲಿ ಐದಾರು ಮೊಟ್ಟೆಗಳು ಪತ್ತೆಯಾಗಿವೆ. ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಪೊಲೀಸ್ ಜೀಪ್‌ನಲ್ಲೇ ಬಿಪಿ ಹರೀಶ್ ಅವರನ್ನು ಅಲ್ಲಿಂದ ಕರೆದುಕೊಂಡು ಹೋಗಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



