ಬಂಟ್ವಾಳ: ಶಾಲಾ ಬಸ್ ಮೇಲೆ ಬಿದ್ದ ಮರ; 4 ವರ್ಷದ ಬಾಲಕಿ ಸಾವು, ಹಲವರಿಗೆ ಗಾಯ
ಮೃತಳನ್ನು ಚಿರನ್ವಿ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಬುಧವಾರ ಬೃಹತ್ ಮರವೊಂದು ಉರುಳಿ ಶಾಲಾ ಬಸ್ ಮೇಲೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಮೃತಳನ್ನು ಚಿರನ್ವಿ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲಡ್ಕದ ಶ್ರೀ ರಾಮ ಶಾಲೆಗೆ ಸೇರಿದ ಬಸ್ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದೆ.
ಸಂಜೆ ಮಕ್ಕಳನ್ನು ಬಿಡಲು ಎಂದಿನಂತೆಯೇ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದಿಂದ ಬಸ್ ಹೊರಟಿತ್ತು. ಕೆಲ ಮಕ್ಕಳನ್ನು ಇಳಿಸಿದ ಬಳಿಕ ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರ ಸಂಚರಿಸುತ್ತಿದ್ದ ಬಸ್ ಮೇಲೆ ಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



