ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಮೇಲೆ ಹಲ್ಲೆ
ಇಂದು ಬೆಳಗಿನ ಜಾವ ಸುಮಾರು 2:17 ರ ಸುಮಾರಿಗೆ ಹಲ್ಲೆ ನಡೆದಿದ್ದು, ಟಂ-ಟಂ ಚಾಲಕನನ್ನು 19 ವರ್ಷದ ದತ್ತು ಎಂದು ಗುರುತಿಸಲಾಗಿದೆ.

ಕಲಬುರಗಿ: ಇಷ್ಟು ದಿನ ಶಾಂತವಾಗಿದ್ದ ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ದೇವಲಗಾಣಗಾಪುರದಲ್ಲಿ ಶುಕ್ರವಾರ ಟಂ-ಟಂ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ.
ಇಂದು ಬೆಳಗಿನ ಜಾವ ಸುಮಾರು 2:17 ರ ಸುಮಾರಿಗೆ ಹಲ್ಲೆ ನಡೆದಿದ್ದು, ಟಂ-ಟಂ ಚಾಲಕನನ್ನು 19 ವರ್ಷದ ದತ್ತು ಎಂದು ಗುರುತಿಸಲಾಗಿದೆ.
ಕೇವಲ 'ದಿಟ್ಟಿಸಿ ನೋಡಿದ' ಎಂಬ ವಿಚಾರವೇ ನೆಪವಾಗಿ, ಟಂ-ಟಂ ಚಾಲಕನಾಗಿದ್ದ ಯುವಕ ದತ್ತು ಎಂಬವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ದೇವಲಗಾಣಗಾಪುರದ ಸಂಗಮ ರಸ್ತೆಯಲ್ಲಿರುವ ಅವಧೂತ ಆಶ್ರಮದ ಸಮೀಪ ಈ ಕ್ರೌರ್ಯ ನಡೆದಿದ್ದು, ದತ್ತು ಮೇಲೆ ಅದೇ ಗ್ರಾಮದ ಪ್ರಜ್ವಲ್ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಎಂಬಿಬ್ಬರು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ದತ್ತು ಅವರನ್ನು ತಕ್ಷಣವೇ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 'ಆರೋಪಿಗಳು, ನಾನು ಅವರನ್ನು ದಿಟ್ಟಿಸಿ ನೋಡಿದೆ' ಎಂಬ ಕ್ಷುಲ್ಲಕ ನೆಪವನ್ನಿಟ್ಟುಕೊಂಡು ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಯುವಕ ಆಸ್ಪತ್ರೆಯಲ್ಲಿದ್ದಾಗ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



