ರಾಜ್ಯ

ಬೆಂಗಳೂರು: NEET Paper Leak ಪ್ರತಿಭಟನೆ ವೇಳೆ ಹೈಡ್ರಾಮಾ; 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ ಪರ ಪೋಸ್ಟರ್ ಪ್ರದರ್ಶನ..!

ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಮಹಿಳೆಯೊಬ್ಬರು ಉಮರ್ ಖಾಲಿದ್ ಹಾಗೂ ಶರ್ಜೀಲ್ ಇಮಾಮ್ ಬೆಂಬಲಿಸುವ ಪೋಸ್ಟರ್ ಹಿಡಿದುಕೊಂಡಿದ್ದರು. ಆ ಪೋಸ್ಟರ್‌ನಲ್ಲಿ "Ukhad Le BLR Police" ಎಂಬ ಘೋಷಣೆಯೂ ಇದ್ದಿತು.

ಬೆಂಗಳೂರು: NEET Paper Leak ಪ್ರತಿಭಟನೆ ವೇಳೆ ಹೈಡ್ರಾಮಾ; 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ ಪರ ಪೋಸ್ಟರ್ ಪ್ರದರ್ಶನ..!
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ
Published On :

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ ವೇಳೆ, 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪರವಾಗಿ ಪೋಸ್ಟರ್ ಪ್ರದರ್ಶಿಸಿಲಾಗಿದ್ದು, ಈ ಬೆಳವಣಿಗೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ವೇಳೆ ಮಹಿಳೆಯೊಬ್ಬರು 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಪರ ಪೋಸ್ಟರ್ ಪ್ರದರ್ಶಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಮಹಿಳೆಯೊಬ್ಬರು ಉಮರ್ ಖಾಲಿದ್ ಹಾಗೂ ಶರ್ಜೀಲ್ ಇಮಾಮ್ ಬೆಂಬಲಿಸುವ ಪೋಸ್ಟರ್ ಹಿಡಿದುಕೊಂಡಿದ್ದರು. ಆ ಪೋಸ್ಟರ್‌ನಲ್ಲಿ "Ukhad Le BLR Police" ಎಂಬ ಘೋಷಣೆಯೂ ಇದ್ದಿತು.

ಇದಕ್ಕೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇತರ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಂತಹ ಪೋಸ್ಟರ್‌ಗಳು ಪ್ರತಿಭಟನೆಯ ಮೂಲ ಉದ್ದೇಶವನ್ನು ಹಾಳು ಮಾಡುತ್ತವೆ ಎಂದು ಹೇಳಿ, ಮಹಿಳೆಗೆ ಸ್ಥಳದಿಂದ ತೆರಳುವಂತೆ ಸೂಚಿಸಿದರು.

ಪೋಸ್ಟರ್ ಪೊಲೀಸ್ ಸಿಬ್ಬಂದಿಯ ಗಮನಕ್ಕೂ ಬಂದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ತಕ್ಷಣವೇ ಅದನ್ನು ವಶಪಡಿಸಿಕೊಂಡರು.

ಈ ಘಟನೆಯಿಂದ ಕೆಲಕಾಲ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನತೆ ಉಂಟಾದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.