KPSC ಅಧ್ಯಕ್ಷರನ್ನು ನೇಮಿಸಿದ್ದೇ ಬಿಜೆಪಿ; ಮುಂದಿನ ವಾರವೇ ಸಂಪುಟ ವಿಸ್ತರಣೆ: ಡಿ.ಕೆ ಶಿವಕುಮಾರ್
ವಿದ್ಯಾರ್ಥಿಗಳ ಮೇಲೆ ಪ್ರಕರಣ ವಾಪಸ್ ಪಡೆಯಬೇಕು. ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದೇವೆ. ಮಕ್ಕಳಿಗೆ ಏಟು ನೀಡಿದ ಬಿಜೆಪಿಯವರ ಮೇಲೆ ಇಡೀ ಸಮೂಹ ದೇಶದಾದ್ಯಂತ ದಂಗೆ ಎದ್ದಿದೆ.

ಚಿತ್ರದುರ್ಗ: ಬಿಜೆಪಿಯವರಿಗೆ ಅವಮಾನ ತಡೆಯಲು ಆಗುತ್ತಿಲ್ಲ. ಪ್ರಧಾನಮಂತ್ರಿಯವರು ಈಗ ಕಣ್ತೆರೆದಿದ್ದಾರೆ. ನಾವು ಸಂಸತ್ತಿನಲ್ಲಿ ಚರ್ಚೆ ಮಾಡಿ ಎಂದು ಆಗ್ರಹಿಸಿದ್ದೇವೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲೆ ಪ್ರಕರಣ ವಾಪಸ್ ಪಡೆಯಬೇಕು. ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದೇವೆ. ಮಕ್ಕಳಿಗೆ ಏಟು ನೀಡಿದ ಬಿಜೆಪಿಯವರ ಮೇಲೆ ಇಡೀ ಸಮೂಹ ದೇಶದಾದ್ಯಂತ ದಂಗೆ ಎದ್ದಿದೆ. ಅದನ್ನ ನೋಡಿ ತಡೆದುಕೊಳ್ಳಲು ಅವರಿಗೆ ಆಗುತ್ತಿಲ್ಲ. ಅದಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್ ಸಿ ಅಧ್ಯಕ್ಷನನ್ನ ನಾವು ಮಾಡಿದ್ದಲ್ಲ. ಬಿಜೆಪಿಯವರೇ ಆಯ್ಕೆ ಮಾಡಿದ್ದು. ಈಗ ಅವರೇ ಸಿಲುಕಿಕೊಂಡಿದ್ದಾರೆ.
ಅದಕ್ಕೆ ಅವರೇ ಮುಂಚಿತವಾಗಿ ಪತ್ರ ಬರೆದು ವಜಾ ಮಾಡಬೇಕು ಎಂದಿದ್ದಾರೆ. ರಾಜ್ಯಪಾಲರು ಕಳಿಸಿದ್ದನ್ನು ನಾವು ಅಂಗೀಕಾರ ಮಾಡಿದ್ದೇವೆ. ತನಿಖೆ ನಡೆಸುತ್ತೇವೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬಿಡದಿ ರೈತರ ವಿರುದ್ಧದ ಪ್ರಕರಣ ಹಿಂಪಡೆಯುತ್ತೀರಾ ಎಂದು ಕೇಳಿದಾಗ, ಅವರೆಲ್ಲರೂ ನಮ್ಮ ರೈತರೇ. ನಾವು ಯಾರ ಮೇಲೂ ಒತ್ತಡ ಹಾಕುವುದಿಲ್ಲ, ತೊಂದರೆ ನೀಡುವುದಿಲ್ಲ ಎಂದು ಹೇಳಿದ್ದೇನೆ. ಅವರು ನಮ್ಮ ಜನ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಬದುಕಲು ಸಾಧ್ಯವಿಲ್ಲ. ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದಾಗ, "ಮುಂದಿನ ವಾರ ನಡೆಯಲಿದೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



