ರಾಜ್ಯ

ಬೆಂಗಳೂರಿನ 37 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ

ಬೆಂಗಳೂರು ವಿಭಾಗದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳು ಸೇರಿವೆ.

ಬೆಂಗಳೂರಿನ 37 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ
ಬೆಂಗಳೂರು ವಿಭಾಗದ 57 ತಾಲ್ಲೂಕುಗಳ ಪೈಕಿ 43 ತಾಲ್ಲೂಕುಗಳು ತೀವ್ರ ಮಳೆ ಕೊರತೆಯ ವ್ಯಾಪ್ತಿಗೆ ಸೇರಿವೆ
Published On :

ಚಿತ್ರದುರ್ಗ: ಬೆಂಗಳೂರು ವಿಭಾಗದ 37 ತಾಲ್ಲೂಕುಗಳು ತೀವ್ರ ಮಳೆ ಕೊರತೆಯಿಂದ ಗಂಭೀರ ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಶನಿವಾರ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಕುರಿತ ವರದಿ ಮಂಡಿಸಿದ ಅವರು, ಬೆಂಗಳೂರು ವಿಭಾಗದ ಎಲ್ಲ ಜಿಲ್ಲೆಗಳಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ ಎಂದು ಹೇಳಿದರು.

ಬೆಂಗಳೂರು ವಿಭಾಗದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳು ಸೇರಿವೆ.

ವಿಭಾಗದ 57 ತಾಲ್ಲೂಕುಗಳ ಪೈಕಿ 43 ತಾಲ್ಲೂಕುಗಳು ತೀವ್ರ ಮಳೆ ಕೊರತೆಯ ವ್ಯಾಪ್ತಿಗೆ ಬಂದಿವೆ. ಅವುಗಳಲ್ಲಿ 37 ತಾಲ್ಲೂಕುಗಳಲ್ಲಿ ಸತತ ಮೂರು ವಾರಗಳಿಂದ ತೀವ್ರ ಮಳೆ ವ್ಯತ್ಯಾಸ ಅಥವಾ ತೀವ್ರ ಶುಷ್ಕ ಹವಾಮಾನ ದಾಖಲಾಗಿದೆ ಎಂದು ಮೀನಾ ಹೇಳಿದರು.

ಜುಲೈ ಅಂತ್ಯದ ವೇಳೆಗೆ ರಾಜ್ಯಾದ್ಯಂತ ಈ ಸಂಖ್ಯೆ 100 ತಾಲ್ಲೂಕುಗಳಿಗೆ ಏರಿಕೆಯಾಗುವ ಆತಂಕವಿದೆ ಎಂದ ಅವರು, 57 ತಾಲ್ಲೂಕುಗಳಲ್ಲಿ ಬಿತ್ತನೆ ಪ್ರಮಾಣ ಶೇ.75ಕ್ಕಿಂತ ಕಡಿಮೆಯಿದ್ದು, 52 ತಾಲ್ಲೂಕುಗಳಲ್ಲಿ ಮಣ್ಣಿನ ತೇವಾಂಶ ಗಣನೀಯವಾಗಿ ಕುಸಿದಿದೆ. ಅವುಗಳಲ್ಲಿ 28 ತಾಲ್ಲೂಕುಗಳು ತೀವ್ರ ತೇವಾಂಶ ಕೊರತೆಯನ್ನು ಎದುರಿಸುತ್ತಿವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು ಶೇ.48ರಷ್ಟು ಮಾತ್ರ ನೀರು ಸಂಗ್ರಹವಾಗಿದೆ ಎಂದು ಅವರು ತಿಳಿಸಿದರು.

ಜಲವಿದ್ಯುತ್ ಉತ್ಪಾದನಾ ಜಲಾಶಯಗಳಲ್ಲಿ ಶೇ.30, ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಶೇ.54 ಹಾಗೂ ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಶೇ.59ರಷ್ಟು ನೀರು ಸಂಗ್ರಹವಾಗಿದೆ ಎಂದು ಹೇಳಿದರು.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಮುಂದಿನ 15 ದಿನಗಳಲ್ಲಿ ಸಾಧಾರಣ ಮಳೆಯಾದರೆ ಪರಿಸ್ಥಿತಿಯಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಾಣಬಹುದು ಎಂದು ಮೀನಾ ಆಶಾಭಾವ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.