ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಏರಿದ ಮಾನಸಿಕ ಅಸ್ವಸ್ಥ; ಆಪರೇಟರ್ ಕ್ಯಾಬಿನ್‌ಗೆ ಪ್ರವೇಶ, ಆತಂಕ ಸೃಷ್ಟಿ!
ಮಾರತ್‌ಹಳ್ಳಿ ಬಳಿ ಮೆಟ್ರೋ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಮೆಟ್ರೋ ನಿರ್ಮಾಣ ಸ್ಥಳದಲ್ಲಿ ವ್ಯಕ್ತಿಯೊಬ್ಬ ಕ್ರೇನ್‌ನ ಮೇಲ್ಭಾಗಕ್ಕೆ ಹತ್ತಿದ್ದರಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಯಿತು. ಆ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರತ್‌ಹಳ್ಳಿ ಬಳಿ ಮೆಟ್ರೋ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಭಾಗಶಃ ಬಟ್ಟೆ ಧರಿಸಿದ್ದ ವ್ಯಕ್ತಿ ಕ್ರೇನ್ ಹತ್ತಿ ಆಪರೇಟರ್ ಕ್ಯಾಬಿನ್‌ಗೆ ಪ್ರವೇಶಿಸಿಸದ್ದಾನೆ. ಇದು ಕಾರ್ಮಿಕರಲ್ಲಿ ಭೀತಿ ಉಂಟುಮಾಡಿದೆ.
ಆತನನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕೆಳಗೆ ಇಳಿಸುವಲ್ಲಿ ಯಶಸ್ವಿಯಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ವ್ಯಕ್ತಿಯನ್ನು ರಕ್ಷಿಸಿದ ನಂತರ ಕಟ್ಟಿಹಾಕಿ ಥಳಿಸಲಾಗಿದೆ ಎಂಬ ವರದಿಯಾಗಿದ್ದು, ಮೆಟ್ರೋ ಅಧಿಕಾರಿಯೊಬ್ಬರು ಆ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ಸತ್ಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಆ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಿದ್ದ ಮತ್ತು ಈ ಸಂಬಂಧ ಬಿಎಂಆರ್‌ಸಿಎಲ್‌ನಿಂದ ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ. ಆದ್ದರಿಂದ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ' ಎಂದು ಅಧಿಕಾರಿ ಹೇಳಿದರು.
ಆ ವ್ಯಕ್ತಿಯನ್ನು ನಂತರ ಆತನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



